ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಕಾವೇರಿ

ಇದನ್ನೂ ಓದಿ:ತಮಿಳುನಾಡಿಗೆ 5000 ಕ್ಯೂಸೆಕ್ಸ್‌ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ

ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆಆರ್‌ಎಸ್ ಹಾಗೂ ಕಬಿನಿಯಿಂದ 5000 ಕ್ಯೂಸೆಕ್ಸ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸಿಎಂ ಕೋರಿದ್ದಲ್ಲದೆ, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *