ಬೆಂಗಳೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ,ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ಪ್ರತಿಭಟಿಸಿ ಬಿಜೆಪಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.
ರಾಜ್ಯ ಸರ್ಕಾರ ತಮಿಳುನಾಡಿನ ಡಿಎಂಕೆ ಸರ್ಕಾರವನ್ನು ಓಲೈಸಲು ಕದ್ದುಮುಚ್ಚಿ ನೀರು ಹರಿಸಿದ್ದಾರೆ. ಇದು ನಾಡಿನ ರೈತರು ಮತ್ತು ಜನತೆ ಮಾಡಿದ ದ್ರೋಹ. ಡಿಸೆಂಬರ್ ವೇಳೆಗೆ ಕುಡಿಯುವ ನೀರು ಸಿಗುವುದು ಕಷ್ಟವಿದೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:ಕಾವೇರಿ ನೀರು ವಿಚಾರದಲ್ಲಿ ಡಿಕೆಶಿಗೆ ಕರ್ನಾಟಕ ಜನರ ಕಷ್ಟ ಗೊತ್ತಿಲ್ಲ: ಸಿ.ಪಿ.ಯೋಗೇಶ್ವರ್
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಶಾಸಕರ ಭವನ ಮತ್ತು ಕುಮಾರ ಕೃಪಾ ಅತಿಥಿ ಗೃಹ ವರ್ಗಾವಣೇ ದಂಧೆಯ ಕೇಂದ್ರವಾಗಿದೆ ಎಂದು ಅವರು ಹೇಳಿದರು. ಅನ್ನಭಾಗ್ಯದ ಬಗ್ಗೆ ಮಾತನಾಡು ಸಿದ್ದರಾಮಯ್ಯ ಅವರು ಒಂದು ಕಾಳು ಅಕ್ಕಿಯನ್ನು ಕೊಟ್ಟಿಲ್ಲ, ಈಗ ಕೊಡುತ್ತಿರುವ 5 ಕೆ.ಜಿ ಅಕ್ಕಿ ಪ್ರಧಾನಿ ನರೇಂದ್ರ ಮೋದಿ ಕೊಡುತ್ತಿರುವ ಅಕ್ಕಿ ಎಂದ ಅವರು, ಒಂದು ಕಾಳು ಅಕ್ಕಿ ಕೊಡದ ಸಿದ್ದರಾಮಯ್ಯ ಅವರದು ನೀಚ ಸರ್ಕಾರ ಎಂದು ಖಾರವಾಗಿ ನುಡಿದರು.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರ ವಿರುದ್ದ ಇದೇ 19 ರಿಂದ ರಾಜ್ಯ ವ್ಯಾಪ್ತಿ ಪ್ರವಾಸ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 25 ಸ್ಥಾನಗಳನ್ನು ಗೆಲ್ಲಲು ಶ್ರಮ ಹಾಕೋಣ ಎಂದರು.
ಕೋಲಾರದ ಕುರುಡುಮಲೆ ವಿನಾಯಕ ದೇವಸ್ಥಾನದ ಆವರಣದಿಂದ ಪ್ರವಾಸ ಆರಂಭಿಸುತ್ತೇನೆ. ಪಕ್ಷದ ಎಲ್ಲ ನಾಯಕರೂ ಜತೆಗಿರುತ್ತಾರೆ ಎಂದರು. ಶಾಸಕರಾದ ಆರ್.ಅಶೋಕ, ಎಸ್.ಆರ್.ವಿಶ್ವನಾಥ್,ಗೋಪಾಲಯ್ಯ, ಮುನಿರತ್ನ, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಗೋವಿಂದ ಕಾರಜೋಳ ಮುಂತಾದವರು ಮಾತನಾಡಿದರು. ಕಾವೇರಿ ನೀರು