ಇಡಿ ದಾಳಿ ಬಗ್ಗೆ ಮಾಹಿತಿ ಇಲ್ಲ – ಗೃಹಸಚಿವ‌ ಡಾ. ಜಿ. ಪರಮೇಶ್ವರ್

ಬೆಂಗಳೂರು: ವಾಲ್ಮೀಕಿ  ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌‍ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ವಿಚಾರಣೆ ಮತ್ತೆ ಇಂದು ಮುಂದುವರೆದಿದೆ. ಈ ನಡುವೆ ಇಡಿ ದಾಳಿ ನಡೆದಿರುವುದು ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸಿಬಿಐ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ರಾಜ್ಯಸರ್ಕಾರಕ್ಕೆ ಯಾವುದೇ ಮಾಹಿತಿ ನೀಡುವುದಿಲ್ಲ. ಸ್ವತಂತ್ರವಾಗಿ ತನಿಖೆ ನಡೆಸುತ್ತಾರೆ. ದಾಳಿ ನಡೆಸುವಾಗಲೂ ಯಾವುದೇ ಮಾಹಿತಿ ನೀಡುವುದಿಲ್ಲ. ಇಂದು ಯಾವ ಹಿನ್ನೆಲೆಗೆ ದಾಳಿ ನಡೆದಿರುವುದು ತಮಗೆ ಗೊತ್ತಿಲ್ಲ ಎಂದು ಹೆಳಿದರು.

ಎಸ್‌‍ಐಟಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ದದ್ದಲ್‌ ಆಪ್ತ ಸಹಾಯಕರ ಹೇಳಿಕೆಗಳನ್ನು ಆಧರಿಸಿ ಇಬ್ಬರನ್ನು ತನಿಖೆಗೆ ಕರೆದಿದ್ದಾರೆ. ರಾಜ್ಯಸರ್ಕಾರ ಇಡೀ ಪ್ರಕರಣವನ್ನು ಎಸ್‌‍ಐಟಿ ತನಿಖೆಗೆ ವಹಿಸಿದೆ. ಮತ್ತೊಂದೆಡೆ ಬ್ಯಾಂಕಿನ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಯುತ್ತಿದೆ ಎಂದರು.

ಇದನ್ನೂ ಓದಿ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಸ್ಲೀಪರ್‌ ಕೋಚ್ ಬಸ್ – ಹಾಲಿನ ಟ್ಯಾಂಕರ್‌ ಡಿಕ್ಕಿ – 18 ಮಂದಿ ಸಾವು

ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರಗಳ ಬಗ್ಗೆ ಮಾಹಿತಿ ಇಲ್ಲದೆ ನಾವು ಹೇಳಿಕೆ ನೀಡಲು ಸಾಧ್ಯವಿಲ್ಲ. ಎಸ್‌‍ಐಟಿ ಮತ್ತು ಸಿಬಿಐ ಅಧಿಕಾರಿಗಳು ಅದನ್ನು ಗಮನಿಸುತ್ತಾರೆ. ತನಿಖೆ ನಡೆಯುವ ಹಂತದಲ್ಲಿ ನಾವು ಯಾವುದೇ ಹೇಳಿಕೆಗಳನ್ನೂ ಕೊಡುವಂತಿಲ್ಲ, ಕೊಡಲೂಬಾರದು ಎಂದು ಹೇಳಿದರು.

ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣವಾಗಿಲ್ಲ ಎಂದು ಯಾರೂ ಹೇಳಿಲ್ಲ. ಅಕ್ರಮವಾಗಿದೆ ಎಂಬ ಕಾರಣಕ್ಕಾಗಿಯೇ ಎಸ್‌‍ಐಟಿ ರಚಿಸಿ ತನಿಖೆ ಮಾಡಲಾಗುತ್ತಿದೆ. ಇಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ನೋಡಿ: ಮಳೆ ಹೆಚ್ಚಳ ಸಾಧ್ಯತೆ – ಸರ್ಕಾರ ಕಣ್ಮುಚ್ಚಿ ಕುಳಿತರೆ ಅಪಾಯ ಕಟ್ಟಿಟ್ಟ ಬುತ್ತಿJanashakthi Media

Donate Janashakthi Media

Leave a Reply

Your email address will not be published. Required fields are marked *