ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಅವರನ್ನು ಕೇಂದ್ರ ತನಿಖಾ ದಳವು (ಸಿಬಿಐ) ತಿಹಾರ್ ಜೈಲಿನಲ್ಲಿ ಬಂಧಿಸಿದೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರು ‘ಸೌತ್ ಗ್ರೂಪ್’ನ ಪ್ರಮುಖ ಸದಸ್ಯೆ ಎಂದು ಆರೋಪಿಸಲಾಗಿದೆ. ಇದು ಮದ್ಯದ ಷೇರಿಗೆ ಪ್ರತಿಯಾಗಿ ದೆಹಲಿಯಲ್ಲಿ ಆಡಳಿತಾರೂಢ ಎಪಿಗೆ 100 ಕೋಟಿ ಕಿಕ್‌ಬ್ಯಾಕ್ ನೀಡಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಕಳೆದ ಮಂಗಳವಾರ ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನ ನಿವಾಸದಿಂದ ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಇದನ್ನೂ ಓದಿ: ಕೆಸಿಆರ್ ಪುತ್ರಿ ಕವಿತಾಗೆ ವಿಚಾರಣೆಗೆ ಹಾಜರಾಗಲು ನೋಟಿಸು ನೀಡಿದ ಜಾರಿ ನಿರ್ದೇಶನಾಲಯ
ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಈಗಾಗಲೇ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅವರು ಬಂಧನದಲ್ಲಿ ಇದ್ದಾರೆ.