ನವದೆಹಲಿ: ಎಎಪಿ ಮುಖ್ಯಸ್ಥ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯದ ಆದೇಶವನ್ನು ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.
ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಇದನ್ನೂ ಓದಿ: ‘ಪಿಡಿಒ’ ಪರೀಕ್ಷೆಯ ನೇಮಕಾತಿಯಲ್ಲೂ ಭಾರಿ ಅಕ್ರಮ: ತನಿಖೆಯಲ್ಲಿ ಬಯಲು!
ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯದ ಆದೇಶವು ವಿಚಾರಣೆ ಇಲ್ಲದೇ ನಡೆದಿದೆ ಎಂದು ಆರೋಪಿಸಿರುವ ಸಿಬಿಐ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರು ಭಾಗಿಯಾಗಿರುವ ಸಂಬಂಧ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದೆ.
ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಪರಿಗಣಿಸಲು ನ್ಯಾಯಾಧೀಶ ಜಿತೇಂದ್ರ ಸಿಂಗ್ ನಿರಾಕರಿಸಿದರು.’ತನಿಖಾ ಸಂಸ್ಥೆಯು ಕೇವಲ ಊಹೆಗಳ ಆಧಾರದ ಮೇಲೆ ಪಿತೂರಿಯ ನಿರೂಪಣೆ ಮಾಡಲು ಪ್ರಯತ್ನಿಸಿದೆ’ ಎಂದು ಅವರು ಸಿಬಿಐ ಅನ್ನು ಕಟುವಾಗಿ ಟೀಕಿಸಿದರು. ಈ ಪ್ರಕರಣದಲ್ಲಿ ಕೇಜ್ರಿವಾಲ್ ಆರು ತಿಂಗಳು, ಸಿಸೋಡಿಯಾ ಎರಡು ವರ್ಷ ಜೈಲಿನಲ್ಲಿದ್ದರು.
ಇದನ್ನೂ ನೋಡಿ: “ಸಂಘಟನೆ ಹಕ್ಕಿಗೆ ಕೈ ಹಾಕಿದರೆ ಹೋರಾಟ ತೀವ್ರ: ಮೀನಾಕ್ಷಿ ಸುಂದರಂ ಎಚ್ಚರಿಕೆ” Janashakthi Media
