ಸದನದಲ್ಲಿ ಚರ್ಚೆಗೆ ನಿಲುವಳಿ ಸೂಚಿಸಿದ ಕಾಂಗ್ರೆಸ್
ಬೆಂಗಳೂರು : ಮಾಜಿ ಮಂತ್ರಿ ಸಿಡಿ ಪ್ರಕರಣದ ಕುರಿತು ಮೊದಲ ಬಾರಿಗೆ ಬಿಜೆಪಿ ಹೈಕಮಾಂಡ್ ಪ್ರತಿಕ್ರಿಯಿಸಿದೆ. ಆರೋಪ ಕೇಳಿಬಂದ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಾಯ್ತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಆರೋಪ ಬಂದ ತಕ್ಷಣ ರಾಜೀನಾಮೆ ಪಡೆಯುವುದು ಬಿಜೆಪಿ ಮಾತ್ರ. ಆದ್ರೆ, ಈ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ತಿದೆ ಎಂದು ಆರೋಪಿಸಿದರು.
ಆರು ಸಚಿವರು ಕೋರ್ಟ್‍ಗೆ ಹೋದರೆ ಕಾಂಗ್ರೆಸ್‍ಗೆ ಏನು ಸಮಸ್ಯೆ ಎಂದು ಅರುಣ್ ಸಿಂಗ್ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‍ನ ದೊಡ್ಡ ದೊಡ್ಡ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂಷಿಸಿದ್ದಾರೆ.
ಇದನ್ನೂ ಓದಿ : ಸಿಡಿ ಪ್ರಕರಣದ ಸೂತ್ರದಾರರು ನಾವಲ್ಲ – ವಿಡಿಯೊ ಹೇಳಿಕೆ ನೀಡಿದ ಮಾಜಿ ಪತ್ರಕರ್ತರು
ಕೊನೆಗೂ ಚರ್ಚೆಗೆ ಮುಂದಾದ ಕಾಂಗ್ರೆಸ್!:
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇದ್ದಾರೆ ಎನ್ನಲಾದ ‘ಸಿಡಿ’ ಕುರಿತು ಅಧಿವೇಶನದಲ್ಲಿ ಚರ್ಚಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನಿಲುವಳಿ ಸೂಚನೆ ಕೊಟ್ಟಿದ್ದಾರೆ.
ಪ್ರಶ್ನೋತ್ತರ ಕಲಾಪ ಹಾಗೂ ಶೂನ್ಯವೇಳೆಯ ಬಳಿಕ ನಿಯಮ 60 ರಡಿ ‘ಸಿಡಿ’ ವಿಚಾರ ಚರ್ಚೆ ಮಾಡಲು ಅವಕಾಶ ಕೋರಿ ಸ್ಪೀಕರ್ ಕಾಗೇರಿ ಅವರಿಗೆ ನೋಟಿಸ್ ನೀಡಿದ್ದಾರೆ. ಹೀಗಾಗಿ ಅಧಿವೇಶನ ಆರಂಭವಾಗಿ 16 ದಿನಗಳ ಬಳಿಕ ಕಾಂಗ್ರೆಸ್ ‘ಸಿಡಿ’ ಪ್ರಕರಣದ ಚರ್ಚೆಗೆ ಮುಂದಾಗಿದೆ.
ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ
ಸಚಿವ ಸೋಮಶೇಖರ್ ಪ್ರತಿಕ್ರಿಯೆ: ಮೈಸೂರಲ್ಲಿ ಮಾತಾಡಿದ ಸಚಿವ ಎಸ್‍ಟಿ ಸೋಮಶೇಖರ್, ಸಿಡಿ ವಿಚಾರಕ್ಕಾಗಿ ನಾವು ಕೋರ್ಟ್ ಮೊರೆ ಹೋಗಲಿಲ್ಲ. ನಾವು ಒಂದು ಸರ್ಕಾರ ಬೀಳಿಸಿ ಮತ್ತೊಂದು ಸರ್ಕಾರ ತಂದ ಕಾರಣ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಖಚಿತ ಮಾಹಿತಿ ಇತ್ತು. ಹೀಗಾಗಿ ನಮ್ಮ ವೈಯಕ್ತಿಕ ತೇಜೋವಧೆ ತಪ್ಪಿಸಲು ಕೋರ್ಟ್ ಮೊರೆ ಹೋದೆವು. ಸದನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಆಗದೇ, ಸಿಡಿ ಬಗ್ಗೆ ಚರ್ಚೆ ಆಗ್ತಿದೆ. ಹೀಗಾಗಿ ನನಗೆ ಸದನಕ್ಕೆ ಹೋಗಲು ಬೇಜಾರಾಗುತ್ತಿದೆ ಎಂದರು.