ಬೆಂಗಳೂರು: ರಾಜ್ಯದಲ್ಲಿ 2023-24ರ ಕೃಷಿ ಹಂಗಾಮಿನ ಹಿಂಗಾರಿನಲ್ಲಿ ಬೆಳೆದ 3133 ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಮುಖ್ಯವಾಗಿ ರಾಜ್ಯದ ಮಧ್ಯ ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 21,000 ಹೆಕ್ಟೇರ್ ಪ್ರದೇಶದಲ್ಲಿ ಕುಸುಬೆ ಬೆಳೆ ಕೃಷಿ ನಡೆಯುತ್ತಿದ್ದು, ರೈತರು ಸರಿಯಾದ ಬೆಲೆ ಇಲ್ಲದೆ ತೊಂದರೆ ಎದುರಿಸುತ್ತಿದ್ದರು. ಇದನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಅಪರ ಕಾರ್ಯದರ್ಶಿಯವರು ಕೇಂದ್ರ ಸಹಕಾರ ಇಲಾಖೆ ಕಾರ್ಯದರ್ಶಿಯವರಿಗೆ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ವ್ಯಾಪ್ತಿಗೆ ತರಲು ಕೋರಿದ್ದರು. ಟನ್
ಇದನ್ನೂ ಓದಿ: ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದಿದ್ದರೆ ಶಿಸ್ತು ಕ್ರಮದ ಎಚ್ಚರಿಕೆ
ನಂತರ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿರುವ ಟಿಬಿ ಜಯಚಂದ್ರ ಅವರು ಈ ಬಗ್ಗೆ ಮುತುವರ್ಜಿ ವಹಿಸಿ ಸಂಬಂಧಿಸಿದ ಇಲಾಖೆಗಳೊಡನೆ ಪತ್ರ ವ್ಯವಹಾರ ಹಾಗೂ ಸಮಾಲೋಚನೆಗಳನ್ನು ನಡೆಸಿದ್ದರು.
ರಾಜ್ಯ ಸರ್ಕಾರವು ಸಂಬಂಧಿಸಿದ ನೋಡಲ್ ಏಜೆನ್ಸಿಗಳ ಸಮನ್ವಯತೆಯೊಂದಿಗೆ ಮುಂಬರುವ ದಿನಗಳಲ್ಲಿ ಬೆಂಬಲ ಬೆಲೆಯಲ್ಲಿ ಕುಸುಬೆ ಬೆಳೆ ಖರೀದಿಗೆ ಕ್ರಮ ವಹಿಸಲಿದೆ ಎಂದು ಜಯಚಂದ್ರ ವಿವರಿಸಿದ್ದಾರೆ.
ಇದನ್ನೂ ನೋಡಿ: ಮೇಘನಾ ಕುಂದಾಪುರ ಗಾಯನದಲ್ಲಿ ರಂಗಗೀತೆಗಳು Janashakthi Media