ಬೆಂಗಳೂರು: ಕೇಂದ್ರ ಸರ್ಕಾರವು ಜಲ ಮಂಡಳಿ ಹಾಗೂ ಪೌರಾಡಳಿತ ಇಲಾಖೆಗೆ ಅಮೃತ್ ಯೋಜನೆಯಡಿ ಬಿಡುಗಡೆ ಮಾಡಿದ್ದ ಕೋಟ್ಯಂತರ ಹಣದ ದುರ್ಬಳಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿರುವುದು ಗೊತ್ತಾಗಿದೆ. ಹಣ
ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪೌರಾಡಳಿತ ಇಲಾಖೆಗೆ ಕೇಂದ್ರ ಸರ್ಕಾರವೂ ಅಮೃತ್ ಯೋಜನೆಯ ಅಡಿಯಲ್ಲಿ 17,000 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತವನ್ನು ಮಂಜೂರು ಮಾಡಿತ್ತು.
ಕೇಂದ್ರ ಸರ್ಕಾರ ಮಂಜೂರು ಮಾಡಿದ್ದ 17 ಸಾವಿರ ಕೊಟಿ ರೂ.ಗಳ ಪೈಕಿ ಶೇ.50 ಕ್ಕೂ ಹೆಚ್ಚು ಮೊತ್ತವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಎನ್.ಆರ್.ರಮೇಶ್ ಅವರು ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ: ಧರ್ಮಸ್ಥಳದ ನಿಗೂಢಗಳು | 4,000 ಪುಟಗಳ ದೂರು ವರದಿ ಸಲ್ಲಿಸಿದ ಎಸ್ಐಟಿ!
ಮಾತ್ರವಲ್ಲ, ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಿದ್ದರು.
ಅಲ್ಲದೇ, ಸಂಪೂರ್ಣ ದಾಖಲೆಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರದ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೂ ಸಹ ದೂರು ನೀಡಿದ್ದರು.
ನಾನು ತಲುಪಿಸಿದ್ದ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಿರುವ ಪ್ರಧಾನ ಮಂತ್ರಿಗಳ ಕಚೇರಿಯ ಸೂಚನೆಯಂತೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಸಂಬಂಧಪಟ್ಟ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆದೇಶಿಸಿದ್ದಾರೆ ಎಂದು ರಮೇಶ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಹಾಗೆಯೇ, ಕೇಂದ್ರದ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯ ಸಚಿವಾಲಯದ ಕಾರ್ಯದರ್ಶಿಗಳೂ ಸಹ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಪತ್ರವನ್ನು ಬರೆದು ಕೂಡಲೇ ಈ ಹಗರಣಕ್ಕೆ ಸಂಬಂಧಿಸಿದ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿರುತ್ತಾರೆ ಎಂದು ತಿಳಿದುಬಂದಿದೆ.
ಇದನ್ನೂ ನೋಡಿ: ಧರ್ಮಸ್ಥಳ ನಿಗೂಢ : ಹೊಸ ಅಪ್ಡೇಟ್ ಏನು? Janashakthi Media
