ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದೂ, ಇದೀಗ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರಿಸಲ್ಟ್ ಯಾವಾಗ ಅನ್ನೋ ಪ್ರಶ್ನೆಗೆ ಇಲ್ಲಿದೆ ಉತ್ತರ. ಬೆಂಗಳೂರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 15, 16 ಮತ್ತು ಏಪ್ರಿಲ್ 17 ರಂದು ಕೆಸಿಇಟಿ ಯನ್ನು ನಡೆಸಿತು. ಮಾಧ್ಯಮ ವರದಿಗಳ ಪ್ರಕಾರ, ಕೆಸಿಇಟಿ 2025 ಫಲಿತಾಂಶವನ್ನು ಮೇ 25 ರೊಳಗೆ ಪ್ರಕಟಿಸುವ ಸಾಧ್ಯತೆಯಿದೆ. ಕರ್ನಾಟಕ ಉನ್ನತ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶಗಳನ್ನು ಘೋಷಿಸಲಿದ್ದಾರೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ: ಜಮ್ಮು ಪ್ರದೇಶದ ಗಡಿ ಭಾಗದ ಶಾಲೆಗಳ ಪುನರಾರಂಭ
ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ?
ಅಭ್ಯರ್ಥಿಗಳು ತಮ್ಮ KCET ಫಲಿತಾಂಶದಲ್ಲಿನ ಯಾವುದೇ ದೋಷಗಳ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಫಲಿತಾಂಶ ಘೋಷಣೆಯ ದಿನಾಂಕದಿಂದ ಮೂರು ದಿನಗಳವರೆಗೆ ಕಾಲಾವಕಾಶವಿರುತ್ತದೆ.
ಸಲ್ಲಿಸಲಾದ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ, ಕೆಇಎ ಮಾನ್ಯವಾದ ಹಕ್ಕುಗಳನ್ನು ಪರಿಗಣಿಸಿ ಅಂತಿಮ ಪರಿಷ್ಕೃತ ಫಲಿತಾಂಶಗಳನ್ನು ನಂತರ ಬಿಡುಗಡೆ ಮಾಡುತ್ತದೆ.
ಇದನ್ನೂ ನೋಡಿ: ಬಿಡದಿ : ಮೂಕ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ Janashakthi Media