ಚೈತ್ರಾ ಕುಂದಾಪುರ ಸೇರಿ 7 ಮಂದಿಗೆ ಇನ್ನು 15 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಬಿಜೆಪಿ ಟಿಕೆಟ್‌ ಹೆಸರಿನಲ್ಲಿ ವಂಚನೆ ಮಾಡಿರುವ ಚೈತ್ರಾ ಕುಂದಾಪುರ ಸೇರಿದಂತೆ 7 ಮಂದಿ ಆರೋಪಿಗಳಿಗೆ ಮುಂದಿನ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿದೆ. ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು ಎಂಬ ಆರೋಪ ಚೈತ್ರಾ ಕುಂದಾಪುರ ತಂಡದ ಮೇಲಿದೆ. ಕಳೆದ ವಾರ ಈ ಎಲ್ಲಾ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆ ಸಂದರ್ಭದಲ್ಲಿ ಒಂದು ವಾರ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಸೂಚಿಸಿತ್ತು.ಚೈತ್ರಾ ಕುಂದಾಪುರ

ಸೆಪ್ಟೆಂಬರ್‌ 22ಕ್ಕೆ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆ ಶನಿವಾರ ಎಲ್ಲಾ ಆರೋಪಿಗಳನ್ನು ಮತ್ತೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್‌ ಮುಂದೆ ಹಾಜರು ಪಡಿಸಲಾಗಿತ್ತು. ಇನ್ನು ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಕಾಲಾವಕಾಶ ಬೇಕು ಎಂದು ಸಿಸಿಬಿ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದರು. ಈ ಹಿನ್ನೆಲೆ ಚೈತ್ರಾ ಕುಂದಾಪುರ ಸೇರಿ ಪ್ರಕರಣದ ವಿಚಾರಣೆ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನನಾಯ್ಕ್, ಧನರಾಜ್, ಶ್ರೀಕಾಂತ್ ಆರೋಪಿಗಳನ್ನು ಮುಂದಿನ 15 ದಿನಗಳವರೆಗೆ ಅಂದರೆ, ಅಕ್ಟೋಬರ್‌ 6 ವರೆಗೂ ನ್ಯಾಯಾಂಗ ಬಂಧನ ಮುಂದುವರೆಸುವಂತೆ ಆದೇಶಿಸಿದೆ.

ಇದನ್ನೂ ಓದಿಚೈತ್ರಾ ಕುಂದಾಪುರ ಗ್ಯಾಂಗ್ ಮಾದರಿಯಲ್ಲೇ ‘ಟಿಕೆಟ್ ಹೆಸರಲ್ಲಿ’ ವಂಚನೆ!

ಪ್ರಕರಣದ ಹಿನ್ನೆಲೆ: ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರ ಕುಂದಾಪುರ ಮತ್ತು ಅವರ ಗ್ಯಾಂಗ್‌ 7 ಕೋಟಿ ರೂಗಳನ್ನು ವಂಚಿಸಿತ್ತು. ಚೈತ್ರಾ ಕುಂದಾಪುರ

ವಂಚನೆ ಆರೋಪ ಮಾಡಿದ್ದ ಗೋವಿಂದ ಬಾಬು ಪೂಜಾರಿ ಪೊಲೀಸರಿಗೆ ನೀಡಿದ ದೂರಿನ ವಿವರದಲ್ಲಿ “ನಾನು ಉಡುಪಿಯ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಕಳೆದ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಸಂದರ್ಭದಲ್ಲಿ ಕೆಲವು ಬೆಂಬಲಿಗರು ಚೈತ್ರಾ ಅವರನ್ನು ನನಗೆ ಪರಿಚಯಿಸಿದ್ದರು. ನನ್ನ ಮುಗ್ಧತೆಯನ್ನು ಬಳಸಿಕೊಂಡ ಚೈತ್ರಾ, ತಾನು ಹಿಂದೂಪರ ಸಂಘಟನೆಯಲ್ಲಿರುವುದರಿಂದ ಆರ್​ಎಸ್​ಎಸ್ಎಸ್ ವರಿಷ್ಠರಿಗೂ ಹತ್ತಿರ, ಪ್ರಧಾನಿ ಕಚೇರಿಯಲ್ಲಿಯೂ ಪ್ರಭಾವಿಯಾಗಿದ್ದೇನೆ. ಈ ಎಲ್ಲ ಪ್ರಭಾವಗಳನ್ನು ಬಳಸಿ ಟಿಕೆಟ್ ಕೊಡಿಸುವುದಾಗಿ ನಂಬಿಸಿದ್ದರು. ನಂತರ ಕೇಂದ್ರದ ಆರ್​ಎಸ್​ಎಸ್​ ಪ್ರಮುಖ ಎಂದು ವಿಶ್ವನಾಥ್ ಎಂಬಾತನನ್ನು ಪರಿಚಯಿಸಿದ್ದರು. ಅವರ ನಿರ್ದೇಶನದ ಮೇರೆಗೆ ಹಂತ ಹಂತವಾಗಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದರು.”

ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರ ಸಂಘಪರಿವಾರದ ತುಷ್ಟೀಕರಣ ನೀತಿ ಅನುಸರಿಸುತ್ತಿದೆ: ಚೈತ್ರ ಕುಂದಾಪುರ ಪ್ರಕರಣ ನಿರ್ವಹಣೆ ಬಗ್ಗೆ ಹೋರಾಟಗಾರರ ಆಕ್ರೋಶ

“ಒಂದು ವೇಳೆ ಟಿಕೆಟ್ ಕೈ ತಪ್ಪಿದರೆ ಹಣ ವಾಪಸ್ ನೀಡುವ ಭರವಸೆ ನೀಡಿದ್ದರು. ಆದರೆ ಮಾರ್ಚ್ ಆರಂಭದಲ್ಲಿ ಗೋವಿಂದ ಬಾಬು ಅವರಿಗೆ ಕರೆ ಮಾಡಿದ್ದ ಆರೋಪಿ ಗಗನ್ ಕಡೂರು, ವಿಶ್ವನಾಥ್ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದರು. ಅನುಮಾನಗೊಂಡ ಗೋವಿಂದ್ ಬಾಬು ಕಾಶ್ಮೀರದಲ್ಲಿರುವ ತಮ್ಮ ಸ್ನೇಹಿತ, ನಿವೃತ್ತ ಸೇನಾಧಿಕಾರಿಯೊಬ್ಬರಿಗೆ ಕರೆ ಮಾಡಿ ವಿಚಾರಿಸಿದಾಗ ಆರ್​​ಎಸ್​​ಎಸ್​ನಲ್ಲಿ ವಿಶ್ವನಾಥ್ ಹೆಸರಿನ ಯಾವ ಹಿರಿಯ ನಾಯಕರೂ ಇಲ್ಲ ಎಂಬುದು ಖಚಿತವಾಗಿತ್ತು. ಈ ಬಗ್ಗೆ ವಿಚಾರಿಸಿ ಹಣ ವಾಪಸ್ ಕೇಳಿದಾಗ ವಿಷದ ಬಾಟಲಿ ತೋರಿಸಿ ಆತ್ಮಹತ್ಯೆಯ ನಾಟಕವಾಡಿದ್ದ ಚೈತ್ರಾ ಬಳಿಕ ಹಣ ವಾಪಸ್ ನೀಡಲು ಸಮಯಾವಕಾಶ ಕೇಳಿದ್ದರು”.

“ಈ ಬಗ್ಗೆ ಮತ್ತಷ್ಟು ವಿಚಾರಿಸಿದಾಗ ಕೆ.ಆರ್.ಪುರಂನಲ್ಲಿ ರಸ್ತೆ ಬದಿ ಕಬಾಬ್ ಮಾರುವವನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ತೋರಿಸಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಸಾಮಾನ್ಯ ವ್ಯಕ್ತಿಗೆ ಆರ್​ಎಸ್​ಎಸ್​ ಪ್ರಚಾರಕನಂತೆ ಮೇಕಪ್ ಮಾಡಿಸಿ ತಮಗೆ ಪರಿಚಯಿಸಿ ವಂಚಿಸಿರುವುದು ತಿಳಿದು ಬಂದಿತ್ತು. ತಕ್ಷಣ ಚೈತ್ರಾ, ಗಗನ್ ಕಡೂರು,  ಹಾಲಶ್ರೀ ಸ್ವಾಮಿ, ರಮೇಶ್, ಧನರಾಜ್, ನಾಯ್ಕ್, ಶ್ರೀಕಾಂತ್, ಪ್ರಸಾದ್ ಬೈಂದೂರು ಎಂಬವರ ವಿರುದ್ಧ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಲಾಯಿತು ಎಂದು ವಿಶ್ವನಾಥ್‌ ತಿಳಿಸಿದ್ದರು.

ಈ ವಿಡಿಯೋ ನೋಡಿ : ಬಳ್ಳಿ ಮಾತ್ರವಲ್ಲ ಬೇರುಗಳನ್ನು ಕೂಡಾ ನಾಶ ಪಡಿಸಬೇಕು: ಚೈತ್ರ ಕುಂದಾಪುರ ವಂಚನೆ ಹಗರಣದ ಬಗ್ಗೆ ಹೋರಾಟಗಾರರ ಆಗ್ರಹ

Donate Janashakthi Media

Leave a Reply

Your email address will not be published. Required fields are marked *