ಮೈಸೂರು: ಚಾಮರಾಜನಗರ ಜಿಲ್ಲಾಧಿಕಾರಿಯವರು ಅವರ ಕಾರ್ಯವ್ಯಾಪ್ತಿಯಲ್ಲಿ ಸರಿಯಾಗಿ ನಿರ್ವಹಿಸದೆ ನಮ್ಮ ಮೇಲೆಯೇ ಆರೋಪ ಮಾಡುತ್ತಿದ್ದಾರೆ. ಮೈಸೂರು ಜಿಲ್ಲೆ ಎಲ್ಲಾ ಮುಂಜಾಗ್ರತೆಯನ್ನು ವಹಿಸಿಕೊಳ್ಳುತ್ತೀದ್ದೇವೆ. ಪರಿಸ್ಥಿತಿ ಕೈಮೀರದಂತೆ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರೇ ಆ ರೀತಿಯ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24 ಗಂಟೆ ಕೆಲಸ ಮಾಡುತ್ತಿದ್ದೇವೆ. ಅಷ್ಟು ಕೆಲಸ ಮಾಡಿದರೂ ನಮ್ಮ ಮೇಲೆ ಆರೋಪ ಮಾಡಿದರೆ ನಮಗೆ ನೋವಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾವುಕರಾದರು.
ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿ ವಿರುದ್ದ ಆರೋಪ ಮಾಡಿರುವ ರೋಹಿಣಿ ಸಿಂಧೂರಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಇದನ್ನು ಓದಿ: ಚಾಮರಾಜನಗರ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ
ಸರ್ಕಾರ ತನಿಖೆಗೆ ಆದೇಶಿಸಿರುವುದರಿಂದ ಬಹಿರಂಗವಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಚಾಮರಾಜನಗರ ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದ್ದರಿಂದ ಅದಕ್ಕೆ ಸಂಬಂಧಿಸಿದಂತೆ ಕೆಲ ವಿಚಾರಗಳ ಬಗ್ಗೆ ಸ್ಪಷ್ಟನೆ ನೀಡಬೇಕಿದೆ ಬಂದಿದೆ ಎಂದು ರೋಹಿಣಿ ಸಿಂಧೂರಿ ವಿವರಿಸಿದರು.
ಆಕ್ಸಿಜನ್ ಸರಬರಾಜಿನ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ಆರೋಪ ಮಾಡಿದ್ದಾರೆ. ಮೈಸೂರು ಡಿಸಿಯಾಗಿರುವ ನಾನು ಚಾಮರಾಜನಗರಕ್ಕಾಗಲಿ ಅಥವಾ ಇನ್ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ತಡೆದಿಲ್ಲ. ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿನ ಸರಬರಾಜುದಾರರು ಹಾಗೂ ಜಿಲ್ಲಾಡಳಿತ ನಡುವಿನ ಸಂವಹನ ಇರುತ್ತೆ. ಈಗ ಮೈಸೂರಿಗೆ ಬಳ್ಳಾರಿಯಿಂದ ಕಡಿಮೆ ಆಕ್ಸಿಜನ್ ಸರಬರಾಜು ಆದರೆ ನಾನು ಬಳ್ಳಾರಿ ಡಿಸಿಯನ್ನು ದೂಷಿಸಲು ಸಾಧ್ಯವೇ?
ಇದನ್ನು ಓದಿ: ಚಾಮರಾಜನಗರ: ಎಲ್ಲಾ ಸಾವುಗಳು ಆಮ್ಲಜನಕ ಕೊರತೆಯಿಂದ ಸಂಭವಿಸಿಲ್ಲ- ಸಚಿವ ಎಸ್.ಸುರೇಶ್ ಕುಮಾರ್
ಸಮರ್ಪಕವಾಗಿ ಕಾರ್ಯನಿರ್ವಹಿಸ ಚಾಮರಾಜನಗರದವರು ಈಗ ಮೈಸೂರಿನ ಮೇಲೆ ದೂಷಿಸುತ್ತಿದ್ದಾರೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರ ನಿಯೋಜಿಸಿರುವ ತನಿಖೆಯ ವಿಚಾರಣೆಯಲ್ಲಿ ಎಲ್ಲವೂ ಸಾಬೀತಾಗಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಇದನ್ನು ಓದಿ: ಆಕ್ಸಿಜನ್ ಕೊರತೆ ಚಾಮರಾಜನಗರದಲ್ಲಿ 24 ಮಂದಿ ಸಾವು
ತಮ್ಮದೇ ಆದ ಆಮ್ಲಜನಕ ಸರಬರಾಜನ್ನು ನಿರ್ವಹಿಸುವುದು ಆಯಾ ಜಿಲ್ಲೆಯ ಜವಾಬ್ದಾರಿಯಾಗಿದೆ. ಯಾವುದೇ ಸರಬರಾಜುದಾರರು ಸರಬರಾಜು ಮಾಡದಿದ್ದರೆ ಅಥವಾ ಜಿಲ್ಲೆಯ ಅಗತ್ಯಗಳನ್ನು ಪೂರೈಸದಿದ್ದರೆ ರಾಜ್ಯ ಮಟ್ಟದ ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ.
ಅವರು ಸತ್ಯಕ್ಕೆ ದೂರವಾದ ವಿಷಯಗಳನ್ನು ಹೇಳಿರುವುದರಿಂದ ಅದಕ್ಕೆ ಸ್ಪಷ್ಟೀಕರಣ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಅಲ್ಲದೆ ಆಸ್ಪತ್ರೆಯಲ್ಲಿದ್ದ 40 ಸಿಲಿಂಡರ್ ಕಳುಹಿಸಿದ್ದೇವೆ. ಎಲ್ಲಿಯೂ ಆಸ್ಪತ್ರೆಯಿಂದ ಆಕ್ಸಿಜನ್ ಕಳುಹಿಸುವುದಿಲ್ಲ. ಇದು ಮಾನವೀಯತೆ ಅಲ್ಲವೇ ? ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿಗೆ ರೋಹಿಣಿ ಸಿಂಧೂರಿ ಪ್ರಶ್ನೆ ಮಾಡಿದ್ದಾರೆ.
ಮೇ 2 ಮತ್ತು 3 ರಂದು ಚಾಮರಾಜನಗರಕ್ಕೆ ಕಳುಹಿಸಿದ ಆಕ್ಸಿಜನ್ ದಾಖಲೆಯನ್ನು ಸಹ ಬಿಡುಗಡೆಗೊಳಿಸಿರುವ ಮಾಹಿತಿ ಬಹಿರಂಗ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರು.