ಬೆಂಗಳೂರು: ಚಾಮರಾಜನಗರ ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ಸಿಐಎಂಎಸ್) ಮೇ 2ರಂದು 24 ಜನರ ಸಾವಿನ ಬಗ್ಗೆ ಕರ್ನಾಟಕ ಹೈಕೋರ್ಟ್ ನೇಮಕ ಮಾಡಿದ್ದ ಮೂವರು ಸದಸ್ಯರ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ.
ಸಮಿತಿಯು ಅಲ್ಲಿ ಸಂಭವಿಸಿದ ಘಟನೆಗೆ ಆಮ್ಲಜನಕ ಕೊರತೆಯೇ ಪ್ರಮುಖ ಕಾರಣ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಇದನ್ನು ಓದಿ: ಆಕ್ಸಿಜನ್ ಕೊರತೆ ಚಾಮರಾಜನಗರದಲ್ಲಿ 24 ಮಂದಿ ಸಾವು
‘ಮೇ 2 ಮಧ್ಯರಾತ್ರಿಯಿಂದ ಮೇ 3ರ ಬೆಳಗಿನ 24 ಗಂಟೆಯ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಆಮ್ಲಜನಕವೇ ಲಭ್ಯವಿರಲಿಲ್ಲ’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಹೇಳಿದೆ ಮತ್ತು ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಶಿಫಾರಸ್ಸು ಮಾಡಿದೆ.
ಕೋವಿಡ್ ದೃಢಪಟ್ಟು ದಾಖಲಾಗಿದ್ದ 24 ಮಂದಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಇತರ ನಾಲ್ವರನ್ನು ಒಳಗೊಂಡ ಸಮಿತಿ ನಡೆಸಿದ ವರದಿಯನ್ನೂ ಸಮಿತಿ ವಿಶ್ಲೇಷಿಸಿದೆ. ಆಮ್ಲಜನಕದ ಕೊರತೆಯಿಂದ ಮೂವರು, ಮೆದುಳಿಗೆ ಆದ ಗಾಯದಿಂದ 7 ಮಂದಿ ಮತ್ತು ಕೋವಿಡ್ ಕಾರಣದಿಂದ 14 ಮಂದಿ ಮೃತಪಟ್ಟಿದ್ದಾರೆ ಎಂದು ಆ ಸಮಿತಿಯ ವರದಿ ಹೇಳಿದೆ.
ಇದನ್ನು ಓದಿ: ಚಾಮರಾಜನಗರ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ
ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂದಿಸಿದ್ದಂತೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿ ನೇಮಿಸಿತ್ತು. ಚಾಮರಾಜ ನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆ ಎಂಬ ಆರೋಪಿಸಲಾಗಿತ್ತು. ಆದರೆ ಪ್ರಕರಣ ಸಂಬಂಧಿಸಿದ ತನಿಖಾ ಸಮಿತಿಯು ರೋಹಿಣಿ ಸಿಂಧೂರಿ ಆಮ್ಲಜನಕ ಪೂರೈಕೆಗೆ ತಡೆಯೊಡಿದ್ದಾರೆ ಎಂಬುದಕ್ಲೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ತಿಳಿಸಿದೆ.
‘ಈ ವಿಚಾರವಾಗಿ ಸಮರ್ಥವಾಗಿ ಕೆಲಸ ಮಾಡುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಆಗುವುದಿಲ್ಲ’ ಎಂದು ವರದಿ ಹೇಳಿದೆ.
ಇದನ್ನು ಓದಿ: ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ
‘ಅತ್ಯಂತ ತುರ್ತು ಸಂದರ್ಭದ ಎದುರಾದಾಗ ಆಮ್ಲಜನಕದ ಅಗತ್ಯವಿತ್ತು. ಆದರೆ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯೇ ಇರಲಿಲ್ಲ. ಆಸ್ಪತ್ರೆಯಲ್ಲಿ ಆಮ್ಲಜನಕದ ಅಭಾವವಾಗಿತ್ತು. ಆಮ್ಲಜನಕ ಕೊರತೆ ಕಾರಣಕ್ಕೆ ಮೆದುಳಿನ ಕೋಶಗಳಿಗೆ ಹಾನಿಯಾಗಿದೆ’ ಎಂದು ತನಿಖೆಯನ್ನು ಕೈಗೊಂಡ ಸಮಿತಿಯು ಅಭಿಪ್ರಾಯಪಟ್ಟಿದೆ.
‘ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಸಿಕೊಳ್ಳುವುದು ಚಾಮರಾಜನಗರ ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಇವುಗಳನ್ನು ಸಮರ್ಪಕವಾಗಿ ಮಾಡದೆ ಇರುವುದೇ ಹೆಚ್ಚಿನ ಜೀವನಗಳು ಬಲಿಯಾಗಿವೆ’ ಎಂದು ವರದಿ ಹೇಳಿದೆ.