ರಾಂಚಿ: ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತದ ಪರೀಕ್ಷೆಯಲ್ಲಿ ಗೆದ್ದಿದ್ದಾರೆ. 81 ಶಾಸಕರ ಪೈಕಿ 47 ಶಾಸಕರ ಬೆಂಬಲ ಪಡೆಯುವ ಮೂಲಕ ಅವರು ಯಶಸ್ವಿಯಾಗಿ ಬಹುಮತ ಸಾಬೀತುಪಡಿಸಿದ್ದಾರೆ. ಹೊಸ ಸರ್ಕಾರಕ್ಕೆ ಬಹುಮತವಿದೆ ಎಂದು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಘೋಷಿಸಿದ ಬೆನ್ನಲ್ಲೇ ಶಾಸಕರು ಹರ್ಷೋದ್ಗಾರಗಳೊಂದಿಗೆ ಮುಖ್ಯಮಂತ್ರಿಯನ್ನು ಅಭಿನಂದಿಸಿದರು. ವಿಶ್ವಾಸಮತ
ಜಾರ್ಖಂಡ್ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಚಂಪೈ ಸೊರೇನ್ ಮೊದಲು ವಿಶ್ವಾಸಮತ ಯಾಚನೆ ಮಂಡಿಸಿದರು. ಬಳಿಕ ಮಾತನಾಡಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಚುನಾಯಿತ ರಾಜ್ಯ ಸರ್ಕಾರವನ್ನು “ಅಸ್ಥಿರಗೊಳಿಸಲು” ಪ್ರಯತ್ನಿಸಿದೆ ಎಂದು ಹೇಳಿದರು. ಈ ಮೂಲಕ ಅವರು ಬಂಧಿತ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಕ್ಲೀನ್ ಚಿಟ್ ನೀಡಿದರು.
ಇದನ್ನೂ ಓದಿ : ಹೇಮಂತ್ ಸೋರೆನ್ | ಬಂಧನಕ್ಕೊಳಗಾದ ಜಾರ್ಖಂಡ್‌ನ 3ನೇ ಮುಖ್ಯಮಂತ್ರಿ
ಹೇಮಂತ್ ಸೂರೇನ್ ಅವರು ಮಾಡದ ಅಪರಾಧಕ್ಕಾಗಿ ಅವರನ್ನು ಎಳೆಯಲಾಗುತ್ತಿದೆ. ಹೇಮಂತ್ ಸೊರೇನ್ ಅವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂದು ಚಂಪೈ ಸೊರೇನ್ ಅವರು ವಿಶ್ವಾಸಮತ ಯಾಚನೆ ವೇಳೆ ಆರೋಪಿಸಿದರು.
ಒಟ್ಟು 81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ ಜೆಎಂಎಂ 29 ಶಾಸಕರನ್ನು ಹೊಂದಿದ್ದು ಮಿತ್ರ ಪಕ್ಷ ಕಾಂಗ್ರೆಸ್ 17 ಶಾಸಕರನ್ನು ಹೊಂದಿದೆ. ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ ಒಂದು ಶಾಸಕರನ್ನು ಹೊಂದಿದೆ.
ವಿಡಿಯೊ ನೋಡಿ: ಓ! ಹಾಗಾದರೆ ನೀವೂ ನಮ್ಹಾಗೆ…! ಮೂಲ : ಫಾಹ್ಮಿದಾ ರಿಯಾಜ್, ಭಾವಾನುವಾದ – ಬಿ.ಸುರೇಶ್ Janashakthi Media