ಚಂಡೀಗಢ ಮೇಯರ್ ಚುನಾವಣೆ ವಿವಾದ | 8 ‘ಅಸಿಂಧು’ ಮತಗಳ ಮರು ಎಣಿಕೆಗೆ ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ: ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಮರುಎಣಿಕೆ ಮತ್ತು ಚುನಾವಣಾಧಿಕಾರಿಯಿಂದ ಅಸಿಂಧು ಎಂದು ಘೋಷಿಸಿದ ಎಂಟು “ತಿದ್ದುಪಡಿಗೊಂಡ” ಮತಗಳನ್ನು ಪರಿಗಣಿಸಿದ ನಂತರ ಫಲಿತಾಂಶವನ್ನು ಘೋಷಿಸಲು ನಿರ್ದೇಶಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಚುನಾವಣಾ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಚುನಾವಣೆಯ ಪರಾಜಿತ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರ ಅರ್ಜಿಯ ವಿಚಾರಣೆಯನ್ನು ಆರಂಭಿಸಿದೆ.

ಇದನ್ನೂ ಓದಿ:ಅಮಿತ್ ಶಾ ವಿರುದ್ಧದ ಹೇಳಿಕೆ ವಿವಾದ | ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ನೇಮಿಸಿದ ನ್ಯಾಯಾಂಗ ಅಧಿಕಾರಿಯೊಬ್ಬರು ತಮ್ಮ ಮುಂದೆ ತಂದಿರುವ ಮತಪತ್ರಗಳನ್ನು ಮತ್ತು ವಿಡಿಯೋ ರೆಕಾರ್ಡಿಂಗ್‌ಗಳನ್ನು ಸುಪ್ರೀಂ ಕೋರ್ಟ್ ಪರಿಶೀಲಿಸುತ್ತಿದೆ. “ಅಮಾನ್ಯಗೊಂಡ ಮತಪತ್ರಗಳನ್ನು ನೋಡಲು ನಾವು ಬಯಸುತ್ತೇವೆ” ಎಂದು ಸಿಜೆಐ ಆರಂಭದಲ್ಲಿ ಹೇಳಿದ್ದಾರೆ. ವಿಚಾರಣೆ ಇನ್ನೂ ನಡೆಯುತ್ತಿದೆ.

‘ಕುದುರೆ ವ್ಯಾಪಾರ’ದ ಬಗ್ಗೆ ಸೋಮವಾರ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮತಪತ್ರಗಳು ಮತ್ತು ಎಣಿಕೆಯ ವಿಡಿಯೋ ರೆಕಾರ್ಡಿಂಗ್ ಅನ್ನು ಪರಿಶೀಲಿಸುವುದಾಗಿ ಹೇಳಿದೆ. ಹೊಸದಾಗಿ ಮತದಾನಕ್ಕೆ ಆದೇಶಿಸುವ ಬದಲು, ಈಗಾಗಲೇ ಚಲಾಯಿಸಿದ ಮತಗಳ ಆಧಾರದ ಮೇಲೆ ಫಲಿತಾಂಶಗಳ ಘೋಷಣೆಯನ್ನು ಪರಿಗಣಿಸಬಹುದು ಎಂದು ಅದು ಹೇಳಿದೆ.

ಇದನ್ನೂ ಓದಿ:ತೆಲಂಗಾಣ | ಕಂಪೆನಿ ತೊರೆದ ದಲಿತ ಉದ್ಯೋಗಿಗಳಿಗೆ ಬೆಲ್ಟ್ ಮತ್ತು ಟೈರ್ ಟ್ಯೂಬ್‌ಗಳಿಂದ ತೀವ್ರ ಥಳಿತ

ಕಾಂಗ್ರೆಸ್ ಮತ್ತು ಎಎಪಿ ಪಕ್ಷಗಳ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿತ್ತು. ಎಎಪಿ-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯ ಪರವಾಗಿದ್ದ ಎಂಟು ಮತಗಳನ್ನು ಚುನಾವಣಾಧಿಕಾರಿ ಅಮಾನ್ಯ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಇದು ಸಾಧ್ಯವಾಗಿದ್ದು, ಈ ಮತಳನ್ನು ಅವರು ತಿದ್ದುಪಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಬಿಜೆಪಿಯ ಮೇಯರ್ ಅಭ್ಯರ್ಥಿ ಮನೋಜ್ ಸೋಂಕರ್ ಅವರು ತಮ್ಮ ಪ್ರತಿಸ್ಪರ್ಧಿ ಕುಲದೀಪ್ ಕುಮಾರ್ ಅವರನ್ನು ಸೋಲಿಸಿ ಮೇಯರ್ ಸ್ಥಾನವನ್ನು ಪಡೆದಿದ್ದರು. ಅದಾಗ್ಯೂ, ಸೋಂಕರ್ ಅವರು ನಂತರ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಮೂವರು ಎಎಪಿ ಕೌನ್ಸಿಲರ್‌ಗಳು ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

ವಿಡಿಯೊ ನೋಡಿ: ಬ್ರಿಟಿಷರಿಗೆ ಸಹಾಯ ಮಾಡಿದ್ದ ವ್ಯಕ್ತಿ ಸ್ವಾತಂತ್ರ್ಯ ಹೋರಾಟಗಾರ ಆಗಲು ಹೇಗೆ ಸಾಧ್ಯ?

Donate Janashakthi Media

Leave a Reply

Your email address will not be published. Required fields are marked *