ಬೆಂಗಳೂರು: ಚಂದ್ರಯಾನ-3 ಲ್ಯಾಂಡರ್ ಚಂದ್ರನ ದಕಿಣದ ದ್ರುವನ ಮೇಲಿಳಿದ ಆಗಸ್ಟ್ 23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಪೀಣ್ಯದಲ್ಲಿರುವ ಇಸ್ರೊ ಕಮಾಂಡಿಂಗ್ ಸೆಂಟರ್ನಲ್ಲಿ ಚಂದ್ರಯಾನ 3 ರ ಯಶಸ್ವಿಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿದರು. ನಂತರ ಮಾತನಾಡಿದ ಅವರು ಆರಸ್ಟ್ 23 ಆ ಕ್ಷಣ ಭಾರತದ ಪಾಲಿಗೆ ಅವಿಸ್ಮರಣೀಯವಾದುದ್ದು. ಈ ಐತಿಹಾಸಿಕ ಸಾಧನೆಯನ್ನು ಸ್ಮರಿಸುವುದಾಕ್ಕಾಗಿ ಆ ದಿನವನ್ನು ಇನ್ನು ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಹೇಳಿದರು.
ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ ಪಾಯಿಂಟ್’ ಎಂದು ನಾಮಕರಣ
ಚಂದ್ರಯಾನ-3 ಯಶಸ್ಸಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪೀಣ್ಯದಲ್ಲಿನ ಇಸ್ರೋ ಕಮಾಂಡ್ ಸೆಂಟರ್ನಲ್ಲಿ ಭೇಟಿ ನೀಡಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ ಪಾಯಿಂಟ್’ ಅಂತಾ ಕರೆಯೋಣ ಎಂದರು. ಹಾಗೂ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಘೋಷಿಸಿದರು.
ಇದನ್ನೂ ಓದಿ:ಚಂದ್ರಯಾನ-3 ಲ್ಯಾಂಡರ್ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೊ
ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ನಾಮಕರಣ
ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು.
ಇದೇ ವೇಳೆ ಮೋದಿಯವರು ಮಹಿಳಾ ವಿಜ್ಞಾನಿಗಳನ್ನು ಕೊಂಡಾಡಿದರು “ಮಹಿಳಾ ವಿಜ್ಞಾನಿಗಳು ಚಂದ್ರಯಾನ 3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ‘ಶಿವಶಕ್ತಿ’ ಪಾಯಿಂಟ್ ಮುಂಬರುವ ಪೀಳಿಗೆಗೆ ವಿಜ್ಞಾನವನ್ನು ಜನರ ಕಲ್ಯಾಣಕ್ಕಾಗಿ ಬಳಸಲು ಪ್ರೇರೇಪಿಸುತ್ತದೆ. ಜನರ ಕಲ್ಯಾಣವು ನಮ್ಮ ಸರ್ವೋಚ್ಚ ಬದ್ಧತೆಯಾಗಿದೆ” ಹೇಳಿದರು. ನಿಮ್ಮನ್ನು ಭೇಟಿಯಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್.ಸದ್ಯ ಭಾರತ ಚಂದ್ರನ ಮೇಲಿದೆ. ದೇಶದ ಘನತೆಯನ್ನು ಉತ್ತುಂಗಕ್ಕೇರಿಸಿದ್ದಕ್ಕೆ ಧನ್ಯವಾದಗಳು ಎಂದರು.
#WATCH | "Today, I am feeling a different level of happiness…such occasions are very rare…this time, I was so restless…I was in South Africa but my mind was with you: PM Modi at ISRO Telemetry Tracking & Command Network Mission Control Complex in Bengaluru pic.twitter.com/j1qmx7jGTp
— ANI (@ANI) August 26, 2023