ಕಲ್ಲುಗಳ ಮಾದರಿಗಳನ್ನು ಹೊರುವ ಶಕ್ತಿ ಹೊಂದಿರುವ ಎರಡು ಪ್ರತ್ಯೇಕ ರಾಕೆಟ್‌ಗಳನ್ನು ಉಡ್ಡಯನ ಮಾಡಲಾಗುವುದು. ಈ ರಾಕೆಟ್‌ಗಳಲ್ಲಿ ಐದು ವಿವಿಧ ಕಾಂಪೋನೆಂಟ್‌ಗಳು ಇರಲಿವೆ. ಇವುಗಳನ್ನು ಕ್ಷಕೆಯಲ್ಲಿ ಜೋಡಿಸಲಾಗುವುದು ಎಂದಿದ್ದಾರೆ.
ಅಲ್ಲದೇ ಮುಂದಿನ ವರ್ಷ ಮಾನವರವನ್ನು ಬಾಹ್ಯಾಕಾಶಕ್ಕೆ ಕಳುಹಿಸಿ, ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳುವ ʻಗಗನಯಾನʼ ಮಿಷನ್ ಅನ್ನು ಕೂಡ ಜಾರಿ ಮಾಡಲಾಗುವುದು. 2026ರಲ್ಲಿ ʻಸಮುದ್ರಯಾನʼ ಮಿಷನ್ ಅನ್ನೂ ಜಾರಿ ಮಾಡಲಿದ್ದೇವೆ. ಸಮುದ್ರದ 6,000 ಮೀಟರ್‌ನಷ್ಟು ಆಳಕ್ಕೆ ಮೂವರು ವಿಜ್ಞಾನಿಗಳು ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ʻರೊಬೊಟ್ ವ್ಯೂಮಿತ್ರಾʼವನ್ನು ಗಗನಯಾನಕ್ಕೆ ಕಳುಹಿಸುವ ಮಹತ್ವದ ಕಾರ್ಯ ಇದೇ ವರ್ಷ ನಡೆಯಲಿದೆ. 1969ರಲ್ಲಿ ಇಸ್ರೋ ಸ್ಥಾಪನೆಯಾದರೂ ಇದರ ಮೊದಲ ಉಡ್ಡಯನ ಕೇಂದ್ರವು 1993ರಲ್ಲಿ ಸ್ಥಾಪನೆಯಾಯಿತು. ಇಸ್ರೋ ಸ್ಥಾಪನೆಯಿಂದ 2014ರ ವರೆಗೆ ಭಾರತೀಯ ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಿದ್ದಕ್ಕಿಂತ ಹೆಚ್ಚಿನ ಅಭಿವೃದ್ಧಿಯು ಕಳೆದ 10 ವರ್ಷಗಳಲ್ಲಾಗಿದೆ ಎಂದರು.