5 ಲಕ್ಷ ರೂ. ಲಂಚ ಪ್ರಕರಣ: ಚಂದ್ರು ಲಮಾಣಿ ಜಾಮೀನು ಅರ್ಜಿಗೆ ಮಾ.11ರಂದು ತೀರ್ಪು

ಬೆಂಗಳೂರು: ಗುತ್ತಿಗೆದಾರರಿಂದ ₹5 ಲಕ್ಷ ಲಂಚ ಸ್ವೀಕರಿಸಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಸೇರಿರುವ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು‌ ಮಾರ್ಚ್‌ 6ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿದ್ದು, ತೀರ್ಪನ್ನು ಮಾರ್ಚ್ 11ಕ್ಕೆ ಕಾಯ್ದಿರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆರೊಪಿಗಳು ಮತ್ತು ಪ್ರಾಸಿಕ್ಯೂಷನ್‌ ಪರ ವಕೀಲರಿಂದ ಸುದೀರ್ಘ ವಾದ-ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತು.

ಇದನ್ನೂ ಓದಿ: ಎಪ್ಸ್ಟೀನ್ ಕಡತಗಳ ಛಾಯೆ: ವಾಷಿಂಗ್ಟನ್‍ ನಿಂದ ದಿಲ್ಲಿಯ ವರೆಗೆ – ಬೃಂದಾ ಕಾರಟ್

ಕಾಮಗಾರಿಯೊಂದರ ಸಂಬಂಧ ಶಾಸಕ ಚಂದ್ರು ಲಮಾಣಿ ಅವರು 11 ಲಕ್ಷ ರು. ಲಂಚಕ್ಕೆ ಬೇಡಿಕೆ ಇರಿಸಿದ ಆರೋಪದಡಿ ಪ್ರಥಮ ದರ್ಜೆ ಗುತ್ತಿಗೆದಾರ ವಿಜಯ್ ಪೂಜಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಅದರಂತೆ ಫೆ.21ರಂದು ಲಕ್ಷ್ಮೇಶ್ವರದ ಬಾಲಾಜಿ ಆಸ್ಪತ್ರೆಯಲ್ಲಿ 5 ಲಕ್ಷ ರು. ಲಂಚ ಸ್ವೀಕರಿಸುವಾಗ ಶಾಸಕ ಚಂದ್ರು ಲಮಾಣಿ, ಅವರ ಆಪ್ತ ಸಹಾಯಕ ಮಂಜುನಾಥ್ ವಾಲ್ಮೀಕಿ ಮತ್ತು ಖಾಸಗಿ ಆಪ್ತ ಸಹಾಯಕ ಗುರು ನಾಯ್ಕ್ ಗದಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಸದ್ಯ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ವಾಸಿಗಳಾಗಿರುವ ಮೂವರು ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ನೋಡಿ: ಗಾಂಧಿ, ನೆಹರೂ ವಿಚಾರಗಳ ಮೇಲೆ ದಾಳಿ: ಉಗ್ರಪ್ಪ ಆರೋಪJanashakthi Media

Donate Janashakthi Media

Leave a Reply

Your email address will not be published. Required fields are marked *