ವಿಜಯಪುರ: ತಾಪಮಾನ ಕುಸಿತವಾಗಿ ಚಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಬೆಳೆಗೆ 10 ಗಂಟೆಯಿಂದ ಶಾಲೆ ಆರಂಭಿಸುವಂತೆ ಜಿಲ್ಲಾಧಿಕಾರಿ ಕೆ. ಆನಂದ್ ಆದೇಶ ಹೊರಡಿಸಿದ್ದಾರೆ.
ಮುಂದಿನ 10 ದಿನಗಳವರೆಗೆ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ: ಹೊಸಕೋಟೆ | ಭೀಮ ಕೊರೆಗಾಂವ್ ವಿಜಯೋತ್ಸವ ಆಚರಣೆಗೆ ದಲಿತ ಸಂಘಟನೆಗಳ ಪೂರ್ವಭಾವಿ ಸಭೆ
ತೀವ್ರ ಚಳಿಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿತ್ತು. ಹೀಗಾಗಿ ಶಾಲೆಗಳ ಸಮಯ ಬದಲಾವಣೆಗೆ ಆಗ್ರಹ ಕೇಳಿ ಬಂದಿತ್ತು. ಶಾಲೆಗಳ ಸಮಯ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಇದನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.
ಇದನ್ನೂ ನೋಡಿ: ಹಿಜಾಬ್ ಗೆ ಕೈ ಹಾಕಿನಿತೀಶ್ ಕುಮಾರ್ ಮಾಡಿದ ಎಡವಟ್ಟು, ಕ್ಷಮಾಯಾಚನೆಗೆ ಪಟ್ಟು Janashakthi Media
