ಈ ವರ್ಷದ ಪಠ್ಯಪುಸ್ತಕದಲ್ಲಿ ಕೆಲವು ಪದಗಳು ಮತ್ತು ವಾಕ್ಯಗಳಷ್ಟೇ ಬದಲಾವಣೆ

ಮೈಸೂರು: ಈ ವರ್ಷ ಪ್ರಾಥಮಿಕ ಶಾಲಾ ಶಿಕ್ಷಣದ ಪಠ್ಯಪುಸ್ತಕದಲ್ಲಿ ಯಾವುದೇ ಮುಖ್ಯ ಬದಲಾವಣೆ ಮಾಡದೇ ಕೆಲವು ವಾಕ್ಯ ಮತ್ತು ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ಪಠ್ಯಪುಸ್ತಕಗಳು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. 95% ನಷ್ಟು ಪುಸ್ತಕಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ. ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ.

ಇದನ್ನು ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ

ಶೂ ವಿತರಣೆಗೆ ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಲಾಗುವುದು ಎಂದಿದ್ದಾರೆ.

ಇದನ್ನು ನೋಡಿ : ಪ್ರಜ್ವಲ್ ರೇವಣ್ಣ – ಲೈಂಗಿಕ ಹತ್ಯಾಕಾಂಡ ಆರೋಪಿJanashakthi Media

Donate Janashakthi Media

Leave a Reply

Your email address will not be published. Required fields are marked *