ಕಲಬುರಗಿ: ಇಂದು ಬುಧವಾರ, ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ತಿಕ್ಕಾಟ ಶುರುವಾಗಿರುವಂತೆಯೇ ಒಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಶೀಘ್ರ
ಈ ಬಗ್ಗೆ ಸ್ಪೆಸಿಫಿಕ್ ಆಗಿ ಹೇಳೋದಿಕ್ಕೆ ಆಗೋದಿಲ್ಲ. ಒಂದೊಂದು ರಾಜ್ಯದಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಉಳಿದ ರಾಜ್ಯಗಳಲ್ಲೂ ಶೀಘ್ರದಲ್ಲೇ ಬದಲಾವಣೆ ಆಗಲಿದೆ ಎಂದರು.
ಇದನ್ನೂ ಓದಿ: ಬಜೆಟ್ ನಲ್ಲಿ ಕೃಷಿ ನಿರ್ಲಕ್ಷಣೆ
ಅಲ್ಲದೇ, ಇನ್ನೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನು ಎಂಟು ದಿನಗಳಲ್ಲಿ ನಮ್ಮಿಂದಲೇ ಪ್ರಕಟಣೆ ಹೊರ ಬೀಳಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದಲಿತ ನಾಯಕರಾದ ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಮತ್ತಿತರರು ತಮ್ಮನ್ನು ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ಅವರಿವರು ಬಂದು ಭೇಟಿಯಾಗುತ್ತಲೇ ಇರುತ್ತಾರೆ. ನಾನು ಎಐಸಿಸಿ ಅಧ್ಯಕ್ಷನಾಗಿದ್ದೇನೆ. ಅದರಲ್ಲಿ ಯಾವ ದೊಡ್ಡ ಮಾತಿದೆ ಎಂದರು.
ಈಗಾಗಲೇ ಸಿಎಂ, ಡಿಸಿಎಂ ಮುಂತಾದ ಮಹತ್ವದ ಹುದ್ದೆಗಳು ಮೇಲ್ವರ್ಗದವರ ಕೈಲಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಿಂದುಳಿದವರಿಗೆ ಬಿಟ್ಟುಕೊಡಬೇಕೆಂಬ ಆಗ್ರಹ ಕಾಂಗ್ರೆಸ್ ಪಕ್ಷದಲ್ಲಿ ಕೇಳಿಬಂದಿದೆ ಎನ್ನಲಾಗಿದ್ದು ಈ ಬಗ್ಗೆ ತೆರೆಮರೆಯ ರಾಜಕಾರಣ ಕೂಡ ಪ್ರಾರಂಭವಾಗಿದೆ.
ಇದನ್ನೂ ನೋಡಿ: ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿJanashakthi Media