ಬೆಂಗಳೂರು: ಸ್ವಾತಂತ್ರ್ಯ ದಿನಾಚಾರಣೆಯ ಪ್ರಯುಕ್ತ ಪ್ರತಿ ವರ್ಷ ವಿಭಿನ್ನ ರೀತಿಯ ವಿಷಯ ವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತದೆ. ಅದರಂತೆ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಹ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದ್ದು.
ಇದೇ ಆಗಸ್ಟ್ 7 ರಿಂದ ಆಗಸ್ಟ್ 15 ರ ವರೆಗೆ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಮೋದಲ ಸ್ವಾತಂತ್ರ್ಯ ಸಂಗ್ರಾಮದ ಸಂಧರ್ಭದಲ್ಲಿ ಕಿತ್ತೂರು ಸಂಸ್ಥಾನದ ಮೇಲಿನ ಬ್ರೀಟಿಷರ ದಬ್ಬಾಳಿಕೆಗಳನ್ನು ಖಂಡಿಸಿ, ಹೋರಾಟ ಮಾಡಿದ್ದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಜೀವನ ಮತು ಹೋರಾಟದ ಕುರಿತು ಪುಷ್ಪಗಳಲ್ಲಿ ಕಲಾಕೃತಿ ಕಂಗೊಳಿಸಲಿವೆ.
ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಕುರಿತು ಮಾಹಿತಿ ಹಾಗೂ ಫಲಪುಷ್ಪ ಪ್ರಧರ್ಶನ ಯಾವ ರೀತಿ ಇರಬೇಕೆಂದು ಬೆಳಗಾವಿ ಮತ್ತು ಕಿತ್ತೂರಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗಿದೆ ಎಂದು ಹಾಗೂ ಈ ಬಾರಿ 11 ಲಕ್ಷ ಜನರು ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಲಾಲ್‌ಬಾಗ್‌ನ ಜಂಟಿ ನಿರ್ದೇಶಕರಾದ ಎಂ. ಜಗದೀಶ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ
ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರು 1820ರ ದಶಕದಲ್ಲಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಹೋರಾಡಿದ್ದರು. ಚೆನ್ನಮ್ಮ ಕಿತ್ತೂರಿನ ರಾಣಿಯಾಗಿದ್ದರೆ, ರಾಯಣ್ಣ ಆಕೆಯ ಸೈನ್ಯದ ಮುಖ್ಯಸ್ಥರಾಗಿದ್ದರು. ಈ ಇಬ್ಬರು ಮಹಾನ್ ವ್ಯಕ್ತಿಗಳ ಹೋರಾಟದ ಕಥೆಯನ್ನು ಈ ಪುಷ್ಪ ಪ್ರದರ್ಶನದಲ್ಲಿ ಹೂವಿನ ಮೂಲಕ ತೋರಿಸಲಾಗುತ್ತದೆ. ಇದು ಪ್ರೇಕ್ಷಕರಿಗೆ ಒಂದು ವಿಶೇಷ ಅನುಭವ ನೀಡಲಿದೆ.
ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಸರ್ಕಾರಿ ಹಾಗೂ ಖಾಸಗಿ ತೋಟಗಾರಿಕಾ ಆಸಕ್ತರ ಮನೆ, ಕಚೇರಿ ಅಥವಾ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅಲಂಕಾರಿಕ ತೋಟಗಳು, ತಾರಸಿ ಅಥವಾ ಕೈ ತೋಟಗಳು, ತರಕಾರಿ, ಔಷಧಿ ಗಿಡಗಳು, ಕುಂಡದಲ್ಲಿ ಬೆಳೆದ ವಿವಿಧ ಜಾತಿಯ ಗಿಡಗಳು ಹಾಗೂ ಚಾನೂರ್, ಥಾಯ್ ಆರ್ಟ್ ಮತ್ತು ಇತರೆ ಪೂರಕ ಕಲೆಗಳಿಗೆ ಸಂಂಧಿಸಿದಂತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಎಂದು ತಿಳಿಸಿದರು.
ಇದನ್ನೂ ನೋಡಿ: ಬಿಹಾರ ಚುನಾವಣೇ | “ವಿಶೇಷ ತೀವ್ರ ಪರಿಷ್ಕರಣೆ”ಎನ್‌ಡಿಎ ಕೂಟದ ಹೊಸ ನಾಟಕ Janashakthi Media
