ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿಸುವಂತೆ ಅಂಗೀಕರವಾದ ನಿರ್ಣಯದ ವಿರುದ್ಧ ಇಂದು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದು, ಭಾರಿ ಕೋಲಾಹಲ ಉಂಟಾದ ಕಾರಣಕ್ಕೆ ಸದನವನ್ನು ಸ್ಪೀಕರ್ ಕೆಲಕಾಲ ಮುಂದೂಡಿದರು.
ಸದನ ಆರಂಭವಾಗುತ್ತಿದ್ದಂತೆ ಬುಧವಾರ ಅಂಗೀಕಾರವಾದ ನಿರ್ಣಯದ ವಿರುದ್ಧ ಬಿಜೆಪಿ ಸದಸ್ಯರು ಪ್ರತಿಭಟಿಸಿದರು. ನಿರ್ಣಯದ ಕುರಿತು ಬಿಜೆಪಿ ಶಾಸಕ ಹಾಗೂ ವಿಪಕ್ಷ ನಾಯಕ ಸುನಿಲ್ ಶರ್ಮಾ ಸದನದಲ್ಲಿ ಮಾತನಾಡುತ್ತಿದ್ದಾಗ, ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್, ಆರ್ಟಿಕಲ್ 370 ಮತ್ತು 35ಎ ಅನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಕೂಡ ಸದನದ ಬಾವಿಗಿಳಿದು, ಬ್ಯಾನರ್ ಕಸಿದು, ತುಂಡು ತುಂಡಾಗಿ ಹರಿದು ಹಾಕಿದರು. ಈ ವೇಳೆ ಉಂಟಾದ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಅಬ್ದುಲ್ ರಹೀಂ ಸದನವನ್ನು 15 ನಿಮಿಷ ಕಾಲ ಮುಂದೂಡಿದರು. ಕಲಾಪ ಮುಂದೂಡಿದ ಬಳಿಕವೂ ಬಿಜೆಪಿ ನಾಯಕರು ಪ್ರತಿಭಟನೆ ಮುಂದುವರೆಸಿದರು.
ಬುಧವಾರ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಕುರಿತು ಸರ್ಕಾರ ನಿರ್ಣಯ ಮಂಡಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಕಲಾಪಕ್ಕೆ ಪದೇ ಪದೇ ಅಡ್ಡಿಯಾದ ಹಿನ್ನೆಲೆಯಲ್ಲಿ ಸದನ ಮುಂದೂಡಲಾಗಿತ್ತು.
ಇದನ್ನೂ ಓದಿ: ಪೊಕ್ಸೊ ಪ್ರಕರಣ: ಅತ್ಯಾಚಾರಕ್ಕೆ ತುತ್ತಾಗಿದ್ದ ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ
ಇಂದು ಬೆಳಗ್ಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ನಿನ್ನ ಅಂಗೀಕರಿಸಿದ ನಿರ್ಣಯದ ವಿರುದ್ಧ ಪ್ರತಿಭಟಿಸಿದ್ದರಿಂದ ಗದ್ದಲ ಉಂಟಾಯಿತು. ಬಿಜೆಪಿ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ ಅವರು ನಿರ್ಣಯದ ಮೇಲೆ ಮಾತನಾಡುತ್ತಿದ್ದಾಗ, ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಕೇಟ್ ಶೇಖ್ ಖುರ್ಷಿದ್ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು.
ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಕೂಡ ಸದನದ ಬಾವಿಗೆ ಹಾರಿ ಬ್ಯಾನರ್ ಕಿತ್ತು ಹಾಕಿದರು. ಗದ್ದಲ ನಡುವೆಯೇ ಸ್ಪೀಕರ್ ಕಲಾಪವನ್ನು 15 ನಿಮಿಷಗಳ ಕಾಲ ಮುಂದೂಡಿದರು. ಆದರೆ, ಸದನ ಮುಂದೂಡಿದ ಬಳಿಕವೂ ಬಿಜೆಪಿ ಸದಸ್ಯರು ಪ್ರತಿಭಟನ ಮುಂದುವರಿಸಿದರು.
ಮತ್ತೆ ಕಲಾಪ ಆರಂಭವಾದಾಗ, ಸ್ಪೀಕರ್ ಅವರು ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳಲು ವಿರೋಧ ಪಕ್ಷದ ಸದಸ್ಯರನ್ನು ವಿನಂತಿಸಿದರೂ ಸಹ ಬಿಜೆಪಿ ಸದಸ್ಯರು ಪ್ರತಿಭಟನೆಯನ್ನು ಮುಂದುವರೆಸಿದರು.ಆಗ ಸ್ಪೀಕರ್, ‘ನೀವು ನಿಯಮಗಳನ್ನು ಮೀರುತ್ತಿದ್ದೀರಿ, ಕಲ ಸದಸ್ಯರ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ, ನಿಮ್ಮ ವರ್ತನೆ ಬೇಸರ ತರಿಸುತ್ತಿದೆ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಾಳೆಗೆ ಕಲಾಪ ಮುಂದೂಡಿದರು.
ಇದನ್ನೂ ನೋಡಿ: ಮರಕುಂಬಿ ಪ್ರಕರಣದ ತೀರ್ಪು :ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಉಳಿಸಿದೆ – ಆರ್ ಕೆ ದೇಸಾಯಿ Janashakthi Media