ಬೆಂಗಳೂರು: ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.
ಇದನ್ನು ಓದಿ : ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.
ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿವೆ. ಅದೇ ರೀತಿ ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು.
ಇದನ್ನು ನೋಡಿ : “ಸಂಜೆ ಹೆಣ್ಣುಮಕ್ಕಳು ನೆಮ್ಮದಿಯಾಗಿ ಓಡಾಡಬೇಕಾದರೆ ಗಂಡಸು ಮನೆಯೊಳಗಿರಬೇಕು” ವಿಕಿಪೀಡಿಯಾ ಜಾಗೃತಿ