ವಾಣಿಯಂಬಾಡಿ: ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ಮಹಿಳೆ ಸೇರಿದಂತೆ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಚೆಟ್ಟಿಯಪ್ಪನೂರಿನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ತಮಿಳುನಾಡು ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆ(ಎಸ್‌ಇಟಿಸಿ)ಯ ಬಸ್ ಬೆಂಗಳೂರಿನತ್ತ ಹೊರಟಿದ್ದ ಓಮ್ನಿ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. “ಎಸ್‌ಇಟಿಸಿ ಬಸ್ ಮೀಡಿಯನ್‌ಗೆ ಡಿಕ್ಕಿ ಹೊಡೆದು ಓಮ್ನಿಬಸ್‌ಗೆ ಡಿಕ್ಕಿ ಹೊಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಇ.ವಿ ಕರಡು ನೀತಿ ಸಿದ್ಧ| 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಗುರಿ; ಸಚಿವ ಎಂಬಿ ಪಾಟೀಲ್
ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು ಹತ್ತು ಆಂಬ್ಯುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡೂ ಬಸ್‌ಗಳ ಚಾಲಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಸ್ಥಳದಲ್ಲೇ ಮೃತಪಟ್ಟರೆ, ಓಮ್ನಿಬಸ್ ಚಾಲಕ ಎನ್ ಸೈಯದ್ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಡಿಯೊ ನೋಡಿ: ದುಡಿಯುವ ಜನರ ಮಹಾಧರಣಿ ನವೆಂಬರ್ 26 ರಿಂದ 28 Janashakthi Media