ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಆಗಸ್ಟ್‌ 6 ಬುಧವಾರ ರಾತ್ರಿ ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಬಾಬು (33) ಎಂಬುವವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯ

ಬಾಬು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ.

ಇದನ್ನೂ ಓದಿ: ಪಂಚಾಯ್ತಿ ಚುನಾವಣೆ: 76 ನಾಮಪತ್ರಗಳು ಸಲ್ಲಿಕೆ

‘ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದಿದ್ದರು. ₹40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ₹25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ನೋಡಿ: ಉತ್ತರಾಖಂಡದಲ್ಲಿ ಮೇಘಸ್ಫೋಟ : ಕೊಚ್ಚಿಹೋದ ಮನೆಗಳು Janashakthi Media

Donate Janashakthi Media

Leave a Reply

Your email address will not be published. Required fields are marked *