ಚಿಕ್ಕಬಳ್ಳಾಪುರ| 5 ವರ್ಷ ನಾನೇ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಬಳ್ಳಾಪುರ: ಜುಲೈ 2ರಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಂಪುಟ ಸಭೆ ನಡೆಯುತ್ತಿದ್ದು, ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ಭೋಗ ನಂದೀಶ್ವರ ದೇಗುಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದರು.

ಇದನ್ನೂ ಓದಿ: ‘ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ ಆರ್‌ಎಸ್‌ಎಸ್ ಬ್ಯಾನ್’ – ಪ್ರಿಯಾಂಕ್ ಖರ್ಗೆ

ನೀವು 5 ವರ್ಷ ಸಿಎಂ ಆಗಿ ಇರಲ್ಲ ಎಂದು ಪಕ್ಷಗಳು ಹೇಳಿಕೆ ನೀಡುತ್ತಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅವರೇನು ಹೈಕಮಾಂಡ? 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಭಾರತೀಯ ಜನತಾ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಬಿಜೆಪಿಯವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಮ್ಮ ಸರ್ಕಾರ ಬಂಡೆ ರೀತಿ ಐದು ವರ್ಷಗಳ ಕಾಲ ಇರಲಿದೆ ನಾನೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತೇನೆ ಎಂದು ಅವರು ತಿಳಿಸಿದರು.

ಇದನ್ನೂ ನೋಡಿ: ನೇರಪ್ರಸಾರ : ಪತ್ರಿಕಾ ದಿನಾಚರಣೆ 2025 ಸ್ಥಳ : ಸುಲೋಚನಾ ಸಭಾಂಗಣ, ವಾರ್ತಾ ಸೌಧ, ಬೆಂಗಳೂರು

Donate Janashakthi Media

Leave a Reply

Your email address will not be published. Required fields are marked *