ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿರುವ ಘಟನೆ ಫೆಬ್ರವರಿ 6ರಂದು ನಡೆದಿದ್ದೂ, ಇದರ ವಿರುದ್ಧ ಪೋಷಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ಸೂಚಿಸಲಾಗಿದೆ.
ಗೌರಿಬಿದನೂರಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿ ಸುಶಾಂತ್ ಗೆ ಶಿಕ್ಷಕರೊಬ್ಬರು ಥಳಿಸಿದಂತ ಆರೋಪ ಕೇಳಿ ಬಂದಿತ್ತು. ಥಳಿತಕ್ಕೆ ಒಳಗಾಗಿದ್ದಂತ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಸಿಬ್ಬಂದಿ ಚಿಕಿತ್ಸೆ ಕೊಡಿಸಿದ್ದರು.
ಇದನ್ನೂ ಓದಿ: ಬೆಂಗಳೂರು ಚಿತ್ರೋತ್ಸವ – ಇಂದು ನಾ ನೋಡಿದ ಚಿತ್ರಗಳು
ಶಾಲಾ ಶಿಕ್ಷಕ ವಿದ್ಯಾರ್ಥಿಯನ್ನು ಥಳಿಸಿದ್ದ ಬಗ್ಗೆ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದರು. ಸೂಕ್ತ ಕಾನೂನು ಕ್ರಮಕ್ಕೂ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಾಗಿದೆ.
ಶಾಲೆಗೆ ಭೇಟಿ ನೀಡಿ, ಐದು ದಿನಗಳಲ್ಲಿ ವರದಿ ನೀಡುವಂತೆ ಸಂಬಂಧಿಸಿದಂತ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮಕ್ಕಳ ರಕ್ಷಣಾ ಆಯೋಗವು ಸೂಚಿಸಿದೆ. ಗೌರಿಬಿದನೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಥಳಿಸಿದ್ದರ ಬಗ್ಗೆ ಸಂಪೂರ್ಣ ವರದಿಯನ್ನು ಐದು ದಿನಗಳಲ್ಲಿ ನೀಡುವಂತೆ ಮಕ್ಕಳ ರಕ್ಷಣಾ ಆಯೋಗವು ಖಡಕ್ ಸೂಚನೆ ನೀಡಿದೆ.
ಇದನ್ನೂ ನೋಡಿ: ಬಸವನಗುಡಿ| ಸಾರ್ವಜನಿಕ ಶೌಚಾಲಕ್ಕೆ ಬೀಗ – ಜನರ ಪರದಾಟ Janashakthi Media
