ಸರ್ಕಾರಿ ಶಾಲೆಗಳಲ್ಲಿ ಜೂನ್ 30ರೊಳಗೆ ಮಕ್ಕಳ ದಾಖಲಾತಿ ಪ್ರಕ್ರಿಯೆ ಪೂರ್ಣ

ಬೆಂಗಳೂರು: ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮೇ 29ಕ್ಕೆ ಶಾಲೆಗಳು ಆರಂಭವಾಗಲಿದ್ದು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಅಂದು ಶಾಲೆಗೆ ಹಾಜರಾಗಿ ಆರಂಭೋತ್ಸವದಲ್ಲಿ ಪಾಲ್ಗೊಳ್ಳಬೇಕು.

ಇದನ್ನೂ ಓದಿ: ಐಪಿಎಲ್‌ 2025 – ಪ್ಲೇ ಆಫ್‌ ಪ್ರವೇಶಿಸಿದ ನಾಲ್ಕು ತಂಡಗಳು

ಶಾಲೆ ಗಳಲ್ಲಿನ ಪಿಎಂ ಪೋಷಣ್, ಕ್ಷೀರಭಾಗ್ಯ, ಪಠ್ಯಪುಸ್ತಕ, ಸಮವಸ್ತ್ರಗಳ ವಿತರಣೆ ಮುಂತಾದ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಕ್ರಿಸ್‌ಮಸ್‌ ಸಂದರ್ಭದಲ್ಲಿ ರಜೆ ನೀಡುವ ಉದ್ದೇಶ ಹೊಂದಿರುವ ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸ ಬೇಕು. ಉಪನಿರ್ದೇಶಕರು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ.

ಕ್ರಿಸ್‌ಮಸ್ ಸಂದರ್ಭದಲ್ಲಿ ನೀಡುವ ರಜೆಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಇದನ್ನೂ ನೋಡಿ: ದೇಶದ ಜನರಿಗೆ ತಣ್ಣೀರು ಎರಚುತ್ತಿರುವ ಮೋದಿ Janashakthi Media

Donate Janashakthi Media

Leave a Reply

Your email address will not be published. Required fields are marked *