ಬೆಂಗಳೂರು: ವಿದ್ಯಾರ್ಥಿಗೆ ಪಿವಿಸಿ ಪೈಪ್‌ನಿಂದ ರಕ್ತ ಹೆಪ್ಪುಗಟ್ಟುವಂತೆ ಥಳಿಸಿದ್ದ ಪ್ರಕರಣ ನಗರದ ಸುಂಕದಕಟ್ಟೆಯ ಹೊಯ್ಸಳ ನಗರದ ಪೈಪ್‌ಲೈನ್ ರಸ್ತೆಯ ಸೇಂಟ್ ಮೇರೀಸ್ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ತಿಳಿಸಿದೆ.
ಇದನ್ನೂ ಓದಿ : ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದುವರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ
ಅಲ್ಲದೆ ಶಾಲೆಗೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿ, ಇಲಾಖಾ ನಿಯಮಾನುಸಾರ ಕ್ರಮ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಕೈಗೊಂಡ ಕ್ರಮದ ವರದಿಯನ್ನು 7 ದಿನಗಳ ಒಳಗಾಗಿ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಗೆ ಆಯೋಗವು ನಿರ್ದೇಶಿಸಿದೆ. ಬೆಂಗಳೂರು
ಸಂತ್ರಸ್ತ ಬಾಲಕನ ಮನೆಗೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಿ, ಘಟನೆ ಸಂಬಂಧಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಹಾಗೂ ಘಟನೆ ಸಂಬಂಧ ದಾಖಲಾಗಿರುವ ಎಫ್ಐಆರ್ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಸೂಚಿಸಲಾಗಿದೆ.
ಇದನ್ನೂ ನೋಡಿ : ಅಂಗನವಾಡಿಗಳಲ್ಲಿ LKG – UKG – ಯಾರಿಗೂ ಆತಂಕ ಬೇಡJanashakthi Media
