ಮಂಗಳೂರು: ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ : ನ್ಯಾಯಾಂಗವು ಪ್ರಜಾಪ್ರಭುತ್ವದ ರಕ್ಷಣೆಯ ಕವಚವಾಗಿ ಕೆಲಸ ಮಾಡಬೇಕು – ಶ್ರೀ P V ಸುರೇಂದ್ರನಾಥನ್
12 ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬುರುಡೆ ಕೇಸ್ ನಲ್ಲಿ ಶಿವಮೊಗ್ಗ ಜೈಲು ಸೇರಿದ್ದ ಆರೋಪಿ ಚಿನ್ನಯ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಇದನ್ನೂ ನೋಡಿ : ಧರ್ಮಸ್ಥಳ | ಭೀಮನನ್ನು ಜೈಲಲ್ಲಿ ಭೇಟಿಯಾಗಿದ್ದು ಯಾರು? ಇದು ತನಿಖೆ ಆಗಬೇಕು – ಎಸ್ ಬಾಲನ್ Janashakthi Media
