ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ರೂ.15 ಲಕ್ಷ ಪರಿಹಾರ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡುವಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ರೂ. 15 ಲಕ್ಷ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಕಾಡುಪಕ್ಕದಲ್ಲಿ ದಾಳಿಯಾಗುತ್ತಿತ್ತು. ಇದೀಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಚಿರತೆಯನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಹಾಗೂ ಮೈಸೂರು ವಲಯದ ಪ್ರದೇಶದ ಆನೆ ಕಾಡಿದಾರ್ ಸುತ್ತಮುತ್ತ ಚಿರತೆಗಳೂ ಇವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮವಹಿಸಲು ಸೂಚಿಸಲಾಗಿದೆ. ಅರಣ್ಯ ಪ್ರಾಣಿಗಳ ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಮೃತಪಟ್ಟಿದ್ದಾಳೆ. ಯುವತಿ ಬಹಿರ್ದೆಸೆ ಹೋಗಿದ್ದ ಸಮಯದಲ್ಲಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮರಣಹೊಂದಿದಳು.

Donate Janashakthi Media

Leave a Reply

Your email address will not be published. Required fields are marked *