ಬೆಂಗಳೂರು : ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಮ್ಮಾವು
ಚಿತ್ರನಗರಿ ನಿರ್ಮಿಸುವ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕುʼ ಎಂದು ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಕ್ರಮ ವಹಿಸಬೇಕು. ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಮುಡಾ ಪ್ರಕರಣ : ಸಿಎಂ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ತನಿಖೆ ಆರಂಭ
* ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕ ಮಾಡಲು ಟೆಂಡರ್ ಕರೆಯಬೇಕು.
* ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಬೇಕು.
* ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪೌಂಡ್ ನಿರ್ಮಿಸುವ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಬೇಕು.
* ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.
* ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರಿ ನಿರ್ಮಾಣವಾಗಬೇಕು.
* ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕು.
• ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರನಗರಿ ಸ್ವರೂಪ ಕುರಿತಾಗಿ ಸಮಗ್ರವಾದ ವರದಿಯನ್ನು ಸಲ್ಲಿಸಬೇಕು.
* ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಲೂ ಪ್ರಸ್ತಾವನೆಯನ್ನು ಸಲ್ಲಿಸಲಿ.
ಇದನ್ನು ನೋಡಿ : ಪಿಚ್ಚರ್ ಪಯಣ 150 – ಭಾಗ 2 ಭಾರತದ ಪ್ರಾಪಗ್ಯಾಂಡ ಸಿನಿಮಾ:ಒಂದು ಇಣುಕು ನೋಟ – ಕೆ.ಫಣಿರಾಜ್ಮ ಶ್ರೀ ಮುರಳಿ ಮಾತುಕತೆ