ಮಾರ್ಚ್‌ 25ಕ್ಕೆ ಮೋದಿ ಕೊನೆ ಭಾಷಣ-ನಂತರ ಚುನಾವಣೆ; ಆಯೋಗಕ್ಕೂ ಮೊದಲೇ ದಿನಾಂಕದ ಸುಳಿವು ನೀಡಿದ ಬಿಜೆಪಿ ಸಂಸದ

ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ವೇಳಾಪಟ್ಟಿ ಬಿಡುಗಡೆಗೆ ಕಾದಿರುವ ಪಕ್ಷಗಳು ಯಾತ್ರೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಚಾರವನ್ನು ಕೈಗೊಂಡಿದೆ. ಮಾಜಿ ಕೇಂದ್ರ ಸಚಿವ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್‌, ಚುನಾವಣಾ ವೇಳಾಪಟ್ಟಿ ಘೋಷಣೆಯ ಸುಳಿವು ನೀಡಿದ್ದು, ಮಾರ್ಚ್‌ 25ಕ್ಕೆ ಪ್ರಧಾನಿ ಮೋದಿ ಕೊನೆ ಭಾಷಣ, ನಂತರ ಚುನಾವಣೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಜಿ.ಎಂ ಸಿದ್ದೇಶ್ವರ್​, ಮಾರ್ಚ 25ಕ್ಕೆ ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ದಾವಣಗೆರೆ ನಗರ ಹೊರ ವಲಯದ ಜಿಎಂಐಟಿ ಬಳಿ ಇರುವ ನಾಲ್ಕು ನೂರು ಎಕರೆ ಪ್ರದೇಶದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಇದರಲ್ಲಿ ಕನಿಷ್ಟ ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇದೇ ಪ್ರಧಾ‌ನ ನರೇಂದ್ರ ಮೋದಿ ಕೊನೆಯ ಭಾಷಣ. ಅದಾದ ಮೇಲೆ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.

ಇದನ್ನು ಓದಿ: ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ನಿಲ್ಲಿಸಿ; ಪ್ರಧಾನಿ ಮೋದಿಗೆ 8 ಪಕ್ಷಗಳ ಮುಖಂಡರ ಪತ್ರ

ಮಾರ್ಚ್ ಕೊನೆಯಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ಏಪ್ರಿಲ್​ನಲ್ಲಿ ಚುನಾವಣೆ ನಡೆಯಲಿದೆ ಎನ್ನುವ ಸುಳಿವು ನೀಡಿದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಮತದಾರರನ್ನು ಸೆಳೆಯಲು ಯಾತ್ರೆಗಳನ್ನು ಕೈಗೊಂಡಿದ್ದು, ಮೂರು ಪಕ್ಷಗಳು ಚುನಾವಣಾ ಪ್ರಚಾರವನ್ನೂ ಆರಂಭಿಸಿವೆ. ಜೊತೆಗೆ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ.

ಕೇಂದ್ರ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ವಿಜಯ ಸಂಕಲ್ಪ ಯಾತ್ರೆ ಮೂಲಕ ಪ್ರವಾಸ ಕೈಗೊಂಡಿದೆ. ಈಗಾಗಲೇ ಪಕ್ಷದ ರಾಷ್ಟ್ರೀಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೆಕ್ಕಕ್ಕೆ ಇಲ್ಲದಷ್ಟು ರಾಜ್ಯಕ್ಕೆ ಆಗಮಿಸಿ, ಸಭೆಗಳಲ್ಲಿ ಭಾಗಿಯಾಗಿದ್ದು, ವಾರಕ್ಕೆ 3 ದಿನ ಎಂಬಂತೆ ಕರ್ನಾಟಕಕ್ಕೆ ಭೇಟಿ ನೀಡುತ್ತಲೇ ಇದ್ದಾರೆ.

ಇದನ್ನು ಓದಿ: ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

ನಾಲ್ಕು ವಿಭಾಗದಲ್ಲಿ ಆರಂಭವಾದ ಬಿಜೆಪಿ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯಲಿದೆ. ಇದಕ್ಕೆ ಪ್ರಧಾನಿ ಆಗಮಿಸಲಿದ್ದು. ಇದು ಪ್ರಧಾನಿ ಕೊನೆಯ ಭಾಷಣ ಮಾಡಲಿದ್ದಾರೆ. ನಂತರ ಚುನಾವಣೆಗೆ ಹೋಗುತ್ತೇವೆ ಎಂದಿದ್ದಾರೆ.

ಏಪ್ರಿಲ್‌ 10 ಅಥವಾ 12ರ ಒಳಗೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಕೆಲ ದಿನಗಳ ಹಿಂದೆ ಹೇಳಿದ್ದರು. ಇನ್ನು ಬೇಗ ಚುನಾವಣೆಗೆ ದಿನಾಂಕ ನಿಗದಿಪಡಿಸುವಂತೆ ಸಿದ್ದರಾಮಯ್ಯ ಸಹ ಚುನಾವಣಾ ಆಯೋಗಕ್ಕೆ ಹೇಳಿದ್ದರು.

ಈ ಬಾರಿಯ ಕರ್ನಾಟಕ ವಿಧಾನಸಭೆಯ ಅವಧಿ ಮೇ 24, 2023ಕ್ಕೆ ಮುಕ್ತಾಯವಾಗಲಿದೆ. ಅದಕ್ಕಿಂತ ಮುಂಚೆಯೇ ಹೊಸ ಸರ್ಕಾರ ಆಯ್ಕೆಯಾಗಬೇಕಿದೆ. ಈ ಹಿನ್ನೆಲೆ ಚುನಾವಣೆ ಘೋಷಣೆಗೆ ಆಯೋಗ ಪೂರ್ವ ಸಿದ್ಧತಾ ಕಾರ್ಯಗಳಲ್ಲಿ ತೊಡಗಿಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *