ಚುನಾವಣಾ ಫಲಿತಾಂಶ ಮಧ್ಯಾಹ್ನ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1:30ಕ್ಕೆ ಪತ್ರಿಕಾಗೊಷ್ಠಿ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಆಯೋಗ, ಮಧ್ಯಾಹ್ನ 1:30ಕ್ಕೆ  ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುವುದಾಗಿ ಹೇಳಿದೆ.  ಕೇವಲ ಬಿಹಾರ ಮಾತ್ರವಲ್ಲದೇ ಉತ್ತರಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ನಾಗಾಲ್ಯಾಂಡ್ ಹಾಗೂ ಗುಜರಾತ್ ರಾಜ್ಯಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಫಲಿತಾಂಶವನ್ನೂ ಆಯೋಗ ಪ್ರಕಟಿಸುತ್ತಿರುವುದು ವಿಶೇಷವಾಗಿದೆ.

Donate Janashakthi Media

Leave a Reply

Your email address will not be published. Required fields are marked *