ಮೈಸೂರು: ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಚುಂಚಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರಶ್ನಿಸಲು ಮುಂದಾದ ಮೈಸೂರು ಭಾಗದ ಒಕ್ಕಲಿಗ ಮುಖಂಡರನ್ನು ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ(ಮಾರ್ಚ್ 24) ನಡೆದಿದೆ.
ಮೈಸೂರಿನ ಅಡ್ಡಂಡ ಕಾರ್ಯಪ್ಪ ನಿನ್ನೆ ವಾಹಿನಿಯೊಂದಕ್ಕೆ ಸಂದರ್ಶನ ನೀಡುವ ವೇಳೆ ಚುಂಚಶ್ರೀಗಳ ಹೆಸರು ಪ್ರಸ್ತಾಪಿಸಿದ್ದರು. ಈ ವೇಳೆ ಚುಂಚಶ್ರೀಗಳು ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರ ಇತರರಿಗೆ ಅಲ್ಲ. ಹಾಗೆಯೇ ಉರಿಗೌಡ, ನಂಜೇಗೌಡ ವಿಚಾರವಾಗಿಯೂ ಮತ್ತಷ್ಟು ಸಂಶೋಧನೆ ಸ್ಚಾಮೀಜಿ ನಡೆಸಲಿ ಎಂಬಿತ್ಯಾದಿ ಮಾತುಗಳನ್ನಾಡಿದ್ದರು. ಈ ಹಿನ್ನಲೆಯಲ್ಲಿ ಇಂದು ಈ ಬಗ್ಗೆ ಚರ್ಚಿಸಲು ಮುಂದಾದ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ ಹಾಗೂ ಇನ್ನಿತರ ಸಂಘಟನೆಯ ನಾಯಕರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.
ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್, ನಿರ್ದೇಶಕರಾದ ಗಿರೀಶ್ ಗೌಡ, ಪ್ರಶಾಂತ್ ಗೌಡ, ರವಿ, ರಾಜಕೀಯ, ಒಕ್ಕಲಿಗ ಸಮುದಾಯದ ಮುಖಂಡ ಬೀಡನಹಳ್ಳಿ ಸತೀಶ್ ಗೌಡ ಮೊದಲಾದವರನ್ನು ಬಂಧಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ