ಅಗತ್ಯವಿದ್ದರೆ ಸಿಐಡಿ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲಿದೆ: ಗೃಹಸಚಿವ ಪರಮೇಶ್ವರ್

ತುಮಕೂರು: ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಅಗತ್ಯವಿದ್ದರೆ ಸಿಐಡಿ ಬಂಧಿಸಲಿದ್ದು, ನೋಟೀಸ್‌ಗೆ ಯಡಿಯೂರಪ್ಪ ಉತ್ತರ ನೀಡಬೇಕಾಗುತ್ತದೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ ಎಂದರು.

ಇದನ್ನು ಓದಿ : ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ : ಸಚಿವ ಡಾ‌. ಶರಣಪ್ರಕಾಶ್‌ ಪಾಟೀಲ್‌

ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲಾಗದು ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ಇದನ್ನು ನೋಡಿ : ಆಡಳಿತ ನಡೆಸುವವರಿಗೆ ಸಂವಿಧಾನ ಶಿಕ್ಷಣದ ಅಗತ್ಯವಿದೆ’ – ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್Janashakthi Media

Donate Janashakthi Media

Leave a Reply

Your email address will not be published. Required fields are marked *