ಚಂಡೀಗಢ: ಪಂಜಾಬ್ ರಾಜ್ಯದಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ(ಎಎಪಿ) ಆಡಳಿತ ಪಕ್ಷದ ಸರ್ಕಾರ ಶಾಸಕರನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ʻಆಪರೇಷನ್ ಕಮಲʼ ಮಾಡಿ, ಎಎಪಿ ಶಾಸಕರನ್ನು ಸೆಳೆದುಕೊಳ್ಳಲು ಯತ್ನಿಸುತ್ತಿದ್ದು, ಬಿಜೆಪಿ ಪಕ್ಷಕ್ಕೆ ತಿರುಗೇಟು ನೀಡಿರುವ ಎಎಪಿ ಸರ್ಕಾರದ ಮುಖ್ಯಮಂತ್ರಿ ಭಗವಂತ್ ಮಾನ್ ತುರ್ತು ಅಧಿವೇಶನ ಕರೆದಿದ್ದಾರೆ.
ಸೆಪ್ಟಂಬರ್ 22ರಂದು ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ಅಂದು ಎಎಪಿ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ.
ವಿಧಾನಮಂಡಲದ ವಿಶೇಷ ಅಧಿವೇಶನವು ಸೆಪ್ಟೆಂಬರ್ 22 ರಂದು ನಡೆಯಲಿದೆ. ಆಪ್ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಪಕ್ಷವು ರಾಜ್ಯದ ಆಪ್ ಸರ್ಕಾರ ಕೆಡವಲು ತಂತ್ರ ರೂಪಿಸುತ್ತಿದ್ದು, ಅದರ ಭಾಗವಾಗಿ ನಮ್ಮ ಶಾಸಕರಿಗೆ ಹಣದ ಆಮಿಷವೊಡ್ಡಿ ಪಂಜಾಬ್ ಜನರು ಮೆಚ್ಚಿ ರಚಿಸಿರುವ ನೆಚ್ಚಿನ ಸರ್ಕಾರವನ್ನು ಬೀಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಭಗವಂತ್ ಮಾನ್ ಆರೋಪಿಸಿದ್ದಾರೆ.
ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಜನರ ಈ ನಂಬಿಕೆಯನ್ನು ನಾವು ಮತ್ತು ನಮ್ಮ ಶಾಸಕರು ಉಳಿಸಿಕೊಳ್ಳುತ್ತೇವೆ. ಹೀಗಾಗಿ ಸೆಪ್ಟಂಬರ್ 22ರಂದು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ವೇಳೆ, ಗೆದ್ದು ನಮ್ಮ ಶಕ್ತಿ ತೋರಿಸಲಾಗುವುದು ಎಂದಿದ್ದಾರೆ.
ಆಪ್ ಸರ್ಕಾರವನ್ನು ಉರುಳಿಸಲು ಬಿಜೆಪಿಯು 1375 ಕೋಟಿ ರೂಪಾಯಿ ಬಳಸುವ ಮೂಲಕ ಪ್ರತಿ ಶಾಸಕರಿಗೆ 25 ಕೋಟಿ ರೂಪಾಯಿ ಕೊಡಲು ಮುಂದಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹಣಕಾಸು ಸಚಿವ ಹರ್ಪಾಲ್ ಚೀಮಾ ಈ ಹಿಂದೆ ಬಿಜೆಪಿ ವಿರುದ್ಧ ಆರೋಪಿಸಿ ಎಎಪಿಯ 10 ಶಾಸಕರನ್ನು ಕುದುರೆ ವ್ಯಾಪಾರ ಮಾಡಲು ಅವರನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದ್ದರು.
ಬಿಜೆಪಿ ಗೋವಾ, ಕರ್ನಾಟಕ, ಮಹಾರಾಷ್ಟ್ರ ಮತ್ತು ಅರುಣಾಚಲ ಪ್ರದೇಶ ಮಾಡಿದ ಆಪರೇಷನ್ ಕಮಲ ತಂತ್ರದಂತೆಯೇ ಈಗ ಪಂಜಾಬ್‌ನಲ್ಲಿಯೂ ಸರ್ಕಾರವನ್ನು ಕಿತ್ತೊಗೆಯಲು ತಂತ್ರ ರೂಪಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ದೆಹಲಿ ರಾಜ್ಯದಲ್ಲಿಯೂ ಇಂತಹುದೇ ತಂತ್ರ ರೂಪಿಸಿದ್ದ ಬಿಜೆಪಿಯು ಎಎಪಿ ಸರ್ಕಾರದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರದ ಶಾಸಕರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡಿದೆ ಎಂದು ಆರೋಪಿಸಿ, ತುರ್ತು ಅಧಿವೇಶನ ಕರೆದು ವಿಶ್ವಾಸಮತ ಯಾಚನೆ ಮಾಡಿ ಗೆದ್ದಿದ್ದರು.