ಕುಂದಾಪುರ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಕಳೆದ ಮೂರು ವರ್ಷಗಳಿಂದ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನಸಹಾಯ ಜಮೆ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಿಐಟಿಯು ನೇತೃತ್ವದ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರ ಮಕ್ಕಳು ಕುಂದಾಪುರ ಶಾಸಕರ ಕಚೇರಿ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಮನವಿ ನೀಡಿದರು.
ಪ್ರತಿಭಟನೆ ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ,ಕುಂದಾಪುರ ವಿಧಾನಸಭಾ ಕ್ಷೇತ್ರದ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನಸಹಾಯ ಬಿಡುಗಡೆಗೆ ಶಾಸಕರು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.
2021-22 ಹಾಗೂ 2022-23 ಸಾಲಿನಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೊಡಬೇಕಾದ ಶೈಕ್ಷಣಿಕ ಧನಸಹಾಯ ಬಿಡುಗಡೆಗೆ ಹಲವು ರೀತಿಯ ಹೋರಾಟಗಳನ್ನು ನಮ್ಮ ಸಂಘದಿಂದ ನಡೆಸಲಾಗಿದೆ ಈ ಬಗ್ಗೆ ಮಂಡಳಿ ಹಾಗೂ ಕಾರ್ಮಿಕ ಸಚಿವರು ನಮ್ಮ ಸಂಘಟನೆ ಜೊತೆ ಮಾತುಕತೆ ನಡೆಸಿ ಬಿಡುಗಡೆ ಮಾಡುವುದಾಗಿಯೂ ಭರವಸೆಯನ್ನೂ ನೀಡಿದ್ದಾರೆ ಆದರೆ ಭರವಸೆ ಭರವಸೆಯಾಗಿಯೇ ಉಳಿದು ವಿಳಂಭ ಧೋರಣೆ ಅನುಸರಿಸಲಾಗುತ್ತಿದೆ. ಕಾರ್ಮಿಕ ಸಚಿವರು ಬೋಗಸ್ ಕಾರ್ಡ್ ನೆಪವೊಡ್ಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದು ಸುರೇಶ್ ಕಲ್ಲಾಗರ ದೂರಿದರು.
ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ ಲ್ಲಿ ವಿದ್ಯಾರ್ಥಿಗಳಾದ ಪಲ್ಲವಿ,ಶ್ರೇಯಲ್ ಎಸ್, ಸಮೀರ್,ಭೂಮಿಕ ಕೆ ಪೂಜಾರಿ ಮೊದಲಾದವರಿದ್ದರು.