ಕಾಕ್ರೋಚ್‌ ಪ್ರತಿಭಟನೆ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಪ್ರಧಾನ್‌ ರಾಜೀನಾಮೆಗೆ ಆಗ್ರಹ

ಬೆಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ವತಿಯಿಂದ ಭಾನುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಕ್ರೋಚ್‌

ಪ್ರತಿಭಟನೆಯಲ್ಲಿ ಯುವಕರು, ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದರು. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಹಾಗೂ ನಟ ಪ್ರಕಾಶ್ ರಾಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ನಟ ಪ್ರಕಾಶ್ ರಾಜ್, ದೇಶದ ಯುವಕರು ತಮ್ಮ ಹಕ್ಕುಗಳು ಮತ್ತು ಭವಿಷ್ಯಕ್ಕಾಗಿ ಹೋರಾಟ ನಡೆಸುತ್ತಿರುವುದಾಗಿ ಹೇಳಿದರು. ಜನರಿಂದ ಆಯ್ಕೆಯಾದ ಸರ್ಕಾರಗಳು ಉದ್ಯೋಗ, ಶಿಕ್ಷಣ ಮತ್ತು ಯುವಜನರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಅವರು ಆಗ್ರಹಿಸಿದರು.

ಇದನ್ನೂ ಓದಿ : ಲೇಖಕಿ ಇಂದಿರಾ ಲಂಕೇಶ್ ನಿಧನ

ಪ್ರತಿಭಟನಾಕಾರರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಿಜೆಪಿ ಸಂಘಟನೆಯು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಪ್ರತಿಭಟನೆ ವ್ಯಾಪಕ ಗಮನ ಸೆಳೆದಿತ್ತು. ಅದರ ಮುಂದುವರಿದ ಭಾಗವಾಗಿ ಹೈದರಾಬಾದ್ ಮತ್ತು ಬೆಂಗಳೂರಿನಲ್ಲೂ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಧಾರಾಕಾರ ಮಳೆಯ ನಡುವೆಯೂ ನೂರಾರು ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಇದನ್ನೂ ನೋಡಿ : ಪಿಚ್ಚರ್‌ ಪಯಣ -174| ಸಿನಿಮಾ – ವಲವಾರ, ಗ್ರಾಮೀಣ ಬದುಕಿನ ಸೊಗಡು | ವಿಶ್ಲೇಷಣೆ – ಎಂ.‌ನಾಗರಾಜ ಶೆಟ್ಟಿ

Donate Janashakthi Media

Leave a Reply

Your email address will not be published. Required fields are marked *