ಯಾದಗಿರಿ: ಜಿಲ್ಲೆಯ ಶಹಾಪುರ ನಗರದ ಖಾಸಗಿ ವಸತಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿ ಸಾವನ್ನಪಿರುವ ಆರೋಪ ಕೇಳಿಬಂದಿದೆ. ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಚೇತನ್ (16) ಸಾವನ್ನಪ್ಪಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಚೇತನ್ನನ್ನು ಕಳೆದ ಎರಡು ದಿನಗಳ ಹಿಂದೆ ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದರು. ಆ ನಂತರ ಯುವಕನನ್ನುಆಸ್ಪತ್ರೆಗೆ ಕರೆದುಕೊಂಡು ಹೋಗಿ ಪೋಷಕರು ಚಿಕಿತ್ಸೆ ಕೊಡಿಸಿದ್ದಾರೆ.
ಇದಾದ ನಂತರ ಇಂದು ಶಾಲೆಯಲ್ಲಿ ಕಿರು ಪರೀಕ್ಷೆ ಇದೆ ಎಂದು ವಿದ್ಯಾರ್ಥಿ ಚೇತನ್ ಶಾಲೆಗೆ ಬಂದಿದ್ದ. ಪರೀಕ್ಷೆ ಬರೆಯುವಾಗ ಸುಸ್ತಾಗಿ ವಾಂತಿ ಹಾಗೂ ಎದೆನೋವು ಕಾಣಿಸಿಕೊಂಡಿತ್ತು. ಆದ್ರೆ ವಾಂತಿ ಮಾಡಿಕೊಂಡರೂ ಗಮನ ಕೊಡದ ಶಿಕ್ಷಕರು ಚೇತನ್ನನ್ನು ಗದರಿ ಶಾಲೆಯಲ್ಲೇ ವಿಶ್ರಾಂತಿ ಪಡೆಯುವಂತೆ ಹೇಳಿದ್ದರಂತೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ: 7 ಜಿಲ್ಲೆಗಳಲ್ಲಿ ಇಂದು ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ
ಆದ್ರೆ ಚೇತನ್ ಸಹೋದರಿ ಪವಿತ್ರಾ ತನ್ನ ಸಹೋದರನಿಗೆ ಹುಷಾರಿಲ್ಲದ ವಿಚಾರವನ್ನು ಪೋಷಕರಿಗೆ ಕರೆ ಮಾಡಿ ತಿಳಿಸುವುದಾಗಿ ಹೇಳಿದ್ರೂ, ಮುಖ್ಯ ಶಿಕ್ಷಕರ ಅನುಮತಿ ಇಲ್ಲದೆ ಫೋನ್ ಕೊಡಲ್ಲ ಎಂದು ಶಿಕ್ಷಕರು ನಿರ್ಲಕ್ಷ್ಯ ತೋರಿದ್ದಾರೆ. ಇದಾದ ಬಳಿಕ, ನಿತ್ರಾಣಗೊಂಡಿದ್ದ ವಿದ್ಯಾರ್ಥಿ ಚೇತನ್ ಶಾಲೆಯಲ್ಲೇ ಮೃತಪಟ್ಟಿದ್ದಾನೆ.
ಆ ಬಳಿಕ ಚೇತನ್ ಸಹಪಾಠಿಗಳು ಬೈಕ್ ಮೇಲೆ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದ್ರೆ ಅಷ್ಟೊತ್ತಿಗಾಗಲೇ ಪ್ರಾಣ ಹೋಗಿರುವುದನ್ನು ವೈದ್ಯರು ಖಚಿತಪಡಿಸಿದ್ದರು. ಹೀಗಾಗಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದಲೇ ಚೇತನ್ ಸಾವಾಗಿದೆ ಎಂದು ಪೋಷಕರ ಆರೋಪಿಸಿದ್ದು, ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಸಂಗನಹಾಳ ಚಲೋ : ಜಾಗೃತಗೀತೆ Janashakthi Media