ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳು 24 ರಿಂದ ಆರಂಭವಾಗಲಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯ ಸರಕಾರ ಮುಂದೂಡಿದೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿ ಪರೀಕ್ಷೆಗಳ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಇದನ್ನು ಓದಿ: ಕೋವಿಡ್ ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರವಲ್ಲವೇ? – ಸುಪ್ರೀಂ ಕೋರ್ಟ್
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಚರ್ಚಿಸಿದ ಸಚಿವರು ಮುಂದಿನ ದಿನಾಂಕವನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮೊದಲೇ ಪ್ರಕಟಿಸಲಾಗುವುದು ಎಂದರು.
ಪರೀಕ್ಷಾ ತಯಾರಿಯಲ್ಲಿರುವ ಯಾವುದೇ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಿರಿ ಎಂದು ಸಚಿವರು ತಿಳಿಸಿದ್ದಾರೆ.
ಮೊದಲನೇ ಪಿಯು ವಿದ್ಯಾರ್ಥಿಗಳಿಗೆ ಬಡ್ತಿ: ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಸಹ ರದ್ದುಪಡಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗಳನ್ನು ಮುಂದೂಡಿರುವುದರಿಂದ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರಬೇಕೆಂದು ಸೂಚಿಸಲಾಗಿದೆ.
ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳ ಚಟುವಟಿಕೆಗಳನ್ನು ಮುಂದುವರೆಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಆಡಳಿತಾತ್ಮಕ ಚಟುವಟಿಕೆಗಳಿಗೂ ಲಭ್ಯವಾಗಬೇಕಿದೆ ಎಂದರು.
ಇದನ್ನು ಓದಿ: ನಟಿ ಕಂಗನಾ ರಣಾವತ್ ಟ್ಟಿಟ್ಟರ್ ಖಾತೆ ಶಾಶ್ವತವಾಗಿ ಸ್ಥಗಿತ!
ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮೇ 24 ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದವು. ರಾಜ್ಯದಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.
ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯಗಳು ಹಾಗೂ 17,470 ಖಾಸಗಿ ಅಭ್ಯಗಳು ಸೇರಿ 68,6708 ಅಭ್ಯಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಇದ್ದರು.