ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ತರಗತಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬಿಪಿ
ತರುಣ್ ಅತ್ತನೂರು (14) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಸಿರವಾರ ತಾಲೂಕಿನ ಅತ್ತನೂರು ಗ್ರಾಮದ ಎಂಟನೇ ತರಗತಿ ವಿದ್ಯಾರ್ಥಿ ತರುಣ್ ಎಂದಿನಂತೆ ಶಾಲೆಗೆ ಆಗಮಿಸಿದ್ದ. ಆದರೆ ಶಾಲೆಯಲ್ಲಿ ಲೋ ಬಿ.ಪಿಯಿಂದ ಏಕಾಏಕಿ ಕುಸಿದು ಬಿದ್ದಿದ್ದ. ಈತನನ್ನು ಶಿಕ್ಷಕರು, ಸಿಬ್ಬಂದಿಗಳು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಅಷ್ಟೊತ್ತಿಗೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಇತ್ಯಾದಿ ಕನಿಷ್ಠ ಬೆಲೆಯಲ್ಲಿ ಖರೀದಿ; ಶೀಘ್ರವೇ ಆದೇಶ: ಈಶ್ವರ ಖಂಡ್ರೆ
ಈ ಕುರಿತು ಶಾಲಾ ಆಡಳಿತ ಮಂಡಳಿ, “ವಿದ್ಯಾರ್ಥಿ ಪಾಠ ಕೇಳುವ ವೇಳೆ ಕಣ್ಣು ಮಬ್ಬಾಗುತ್ತಿದೆ ಮುಂದೆ ಬಂದು ಕುಳಿತುಕೊಳ್ಳುವೆ ಎಂದು ದಿಢೀರ್ ಕುಸಿದುಬಿದ್ದಿದ್ದಾನೆ. ಆಗಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಬಿಪಿ ಲೋ ಆಗಿದ್ದರಿಂದ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ” ಎಂದು ತಿಳಿಸಿದ್ದಾರೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ನೋಡಿ: ಪಿಚ್ಚರ್ ಪಯಣ | ಹಸಿವಿನ ಪಾಠ ಹೇಳುವ ವಾಳೈJanashakthi Media