ಬೀಜಿಂಗ್‌ | ತೀವ್ರ ಹಿಮಪಾತ : ಮೌಂಟ್‌ ಎವರೆಸ್ಟ್‌ನಲ್ಲಿ ಸಿಲುಕಿರುವ ಒಂದು ಸಾವಿರ ಪರ್ವತಾರೋಹಿಗಳು

Please follow and like us:
ಬೀಜಿಂಗ್‌: ಟಿಬೆಟಿಯನ್‌ ಇಳಿಜಾರಿನ ಶಿಬಿರಗಳಲ್ಲಿ ಸುಮಾರು ಒಂದು ಸಾವಿರ ಪರ್ವತಾರೋಹಿಗಳು ಸಿಲುಕಿದ್ದು, ಜಗತ್ತಿನ ಅತಿ ಎತ್ತರದ ಪರ್ವತ ಮೌಂಟ್‌ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತವಾದ ಕಾರಣ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೀಜಿಂಗ್‌

ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆ ಐಸಿಯು ವಾರ್ಡ್‌ನಲ್ಲಿ ಬೆಂಕಿ ಅವಘಡ; 8 ಮಂದಿ ಸಾವು

ಪರ್ವತ ಪ್ರದೇಶವನ್ನು ತಲುಪುವ ಹಾದಿಯೂ ಹಿಮದಿಂದ ಮುಚ್ಚಿದ್ದು, ತೆರವಿಗೆ ನೂರಾರು ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.

ಈಗಾಗಲೇ ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮದ ವರದಿ ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ.

ಪರ್ವತಾರೋಹಿಗಳ ನೆಚ್ಚಿನ ಪ್ರದೇಶವಾದ ಟಿಬೆಟ್‌ನ ಮೌಂಟ್ ಎವರೆಸ್ಟ್‌ನ ಪೂರ್ವ ಇಳಿಜಾರುಗಳಲ್ಲಿ ಶುಕ್ರವಾರ ಸಂಜೆಯಿಂದ ಭಾರಿ ಹಿಮಪಾತ ಪ್ರಾರಂಭವಾಗಿದೆ.

ಹವಾಮಾನ ವೈಪರೀತ್ಯದ ಹಿನ್ನೆಲೆ ಎವರೆಸ್ಟ್‌ ಪರ್ವತಾರೋಹಣಕ್ಕೆ ಟಿಕೆಟ್‌ ಕಾಯ್ದಿರಿಸುವಿಕೆಯನ್ನೂ ಸ್ಥಗಿತಗೊಳಿಸಲಾಗಿದೆ.

ನೆರೆಯ ನೇಪಾಳದಲ್ಲೂ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ 52 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇದನ್ನೂ ನೋಡಿ : RSS ದೇಶದ್ರೋಹಿ ಸಂಘಟನೆ – ಬಿ.ಕೆ. ಹರಿಪ್ರಸಾದ್ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *