ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದು ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ.
ಈ ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು ಅವಶೇಷಗಳಡಿಯಲ್ಲಿ ಸಿಲುಕಿ 7 ಜನರು ಮೃತಪಟ್ಟಿದ್ದು, 3 ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಎನ್‌ಐ ಸುದ್ಧಿ ಸಂಸ್ಥೆ ವರದಿ ಮಾಡಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣರೆಯಲ್ಲಿ ತೊಡಗಿದೆ.ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಉತ್ತರ ಪ್ರದೇಶ | ಸಕಾಲಕ್ಕೆ ಸಿಗದ ಆಂಬ್ಯುಲೆನ್ಸ್ : ರಾಜಭವನದೆದುರು ಹೆರಿಗೆ, ಶಿಶು ಸಾವು
ಕಳೆದ 24 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.ಮೊನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಖ್ವಿಂದರ್ ಸಿಂಗ್ ತಿಳಿಸಿದ್ದಾರೆ.
Devastated to hear about the loss of 7 precious lives in the tragic cloud burst incident at Village Jadon, Dhawla Sub-Tehsil in Solan District. My heartfelt condolences go out to the grieving families. We share in your pain and sorrow during this difficult time. We have directed…
— Sukhvinder Singh Sukhu (@SukhuSukhvinder) August 14, 2023
#UPDATE | Death toll rises to seven when two more bodies were recovered after an incident of cloudburst was reported at Jadon village of Kandaghat sub division in Solan, Himachal Pradesh
— ANI (@ANI) August 14, 2023