ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದ ಆದೇಶವನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಲ್ಲಂಘಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಹಾರ, ತುರಾಯಿ, ದುಬಾರಿ ಸನ್ಮಾನ ಸ್ವೀಕರಿಸುವ ಮೂಲಕ ಉಲ್ಲಂಘಿಸಿದ್ದಾರೆ.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ @ShobhaBJP ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿವೇತನ ವಿತರಿಸಿದರು. ಸಚಿವರುಗಳಾದ @bcpatilkourava, @PrabhuChavanBJP, @MunirathnaMLA, @BCNagesh_bjp, ಸಾವಯವ ಕೃಷಿ ಕುರಿತ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಎ.ಎಸ್.ಆನಂದ್, ಸಂಸದರು, ಶಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು. (2/2) pic.twitter.com/dWrsVpop6L
— CM of Karnataka (@CMofKarnataka) September 5, 2021
ಸರಕಾರದ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಹಾರ, ತುರಾಯಿ, ದುಬಾರಿ ಬೆಲೆಯ ಉಡುಗೊರೆ ನೀಡುವುದನ್ನು ನಿಷೇಧಿಸಿ ಬಸವರಾಜ ಬೊಮ್ಮಾಯಿವರು ಸಿಎಂ ಆದ ತಕ್ಷಣವೇ ಆದೇಶ ಹೊರಡಿಸಿದ್ದರು. ಅಲ್ಲದೇ, ಅದರ ಬದಲಾಗಿ ಪುಸ್ತಕಗಳನ್ನು ನೀಡುವಂತೆ ಸೂಚಿಸಲಾಗಿತ್ತು. ಇದು ಬಾರೀ ಪ್ರಚಾರ ಪಡೆದು ಪರ ವಿರೋಧ ವ್ತಕ್ತವಾಗಿತ್ತು. ಆದರೆ, ನಿನ್ನೆ ವಿಧಾನಸೌಧದ ಬ್ಯಾಂಕ್ಟೇಟ್ ಹಾಲ್ ನಲ್ಲಿ ನಡೆದ ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೇ ಹಾರ, ಶಾಲು, ಬೆಳ್ಳಿಯ ಸ್ಮರಣಿಕೆಗಳನ್ನು ಸ್ವೀಕರಿಸಿದ್ದು, ಮತ್ತು ನೀಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನೂ ಇದೇ ರೀತಿ ಸನ್ಮಾನಿಸಲಾಯಿತು. ಕೃಷಿ ಸಚಿವ ಬಿ.ಸಿ. ಪಾಟೀಲ ಮತ್ತು ತೋಟಗಾರಿಕೆ ಸಚಿವ ಮುನಿರತ್ನ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಎಲ್ಲರನ್ನೂ ಸನ್ಮಾನಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದರಾದ ಮುನಿಸ್ವಾಮಿ, ಡಾ.ಉಮೇಶ್ ಜಾಧವ್, ಈರಣ್ಣ ಕಡಾಡಿ ವೇದಿಕೆಯಲ್ಲಿದ್ದರು. ಸರಕಾರಿ ಸಭೆ, ಸಮಾರಂಭಗಳಲ್ಲಿ ಹಾರ ತುರಾಯಿ, ದುಬಾರಿ ಉಡುಗೊರೆ ಬೇಡ ಎಂಬ ಆದೇಶವನ್ನು ಜಾರಿ ಮಾಡಿ ಸ್ವತಂ ಅವರೆ ಉಲ್ಲಂಘನೆ ಮಾಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಅನೇಕರು ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.