ಸಂಜೆ ಸಿಎಂ ಮಹತ್ವದ ಸಭೆ : ವೀಕೆಂಡ್‌ ಲಾಕ್‌ಡೌನ್‌ ತೆರವು ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇರುವ ಹಿನ್ನೆಲೆಯಲ್ಲಿ ಹಾಗೂ ಕಳೆದ ಎರಡು ವಾರಗಳಿಂದ ಜಾರಿಯಲ್ಲಿರುವ ವೀಕ್‌ಎಂಡ್ ಲಾಕ್‌ಡೌನ್ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಸಂಜೆ ನಡೆಯುವ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.

ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ4 ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಇನ್ನಷ್ಟು ಹೊಸ ನಿಯಮ ಜಾರಿಗೆ ಬರುತ್ತದೆಯೋ, ಅಥವಾ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಮುಂದುವರಯುತ್ತದೆಯೋ, ಎಂಬುದು ಸ್ಪಷ್ಟವಾಗಲಿದೆ.

ಬೆಂಗಳೂರಿನಲ್ಲಿ ವಾರಾಂತ್ಯದ ಲಾಕ್‌ಡೌನ್ ಬೇಡ ಎಂದು ಹೊಟೇಲ್ ಸಂಘ ಹಾಗೂ ಬಾರ್ ಆಂಡ್ ರೆಸ್ಟೋರೆಂಟ್ ಮಾಲೀಕರ ಸಂಘ ಸೋಮವಾರ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದೆ. ಇದರಿಂದ ವ್ಯಾಪಾರ ನಷ್ಟವಾಗುತ್ತಿದ್ದು, ಸರಕಾರ ನಿಯಮ ಸಡಿಲಿಕೆ ಮಾಡಬೇಕೆಂದು ಮನವಿ ಸಲ್ಲಿಸಿವೆ. ಅದೇ ರೀತಿ ನಾನಾ ವಾಣಿಜ್ಯ ಸಂಸ್ಥೆಗಳಿಂದಲೂ ವಾರಾಂತ್ಯದ ಲಾಕ್‌ಡೌನ್ ವಿರುದ್ಧ ಅಪಸ್ವರ ಎದ್ದಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಈ ಸಭೆಯಲ್ಲಿ ಸಚಿವರ ಜತೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ತಜ್ಞರು ಭಾಗವಹಿಸಲಿದ್ದಾರೆ. ವಿಶೇಷವಾಗಿ ಮಕ್ಕಳ ಆರೋಗ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಪೂರ್ಣ ಪ್ರಮಾಣದಲ್ಲಿ ಲಾಕ್‌ಡೌನ್ ಜಾರಿ ಮಾಡದೇ ಇರಲು ಸರಕಾರ ನಿರ್ಧರಿಸಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಬ್ಯವಾಗಿದೆ.

Donate Janashakthi Media

Leave a Reply

Your email address will not be published. Required fields are marked *