ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ | ಸಿಎಂ -ಡಿಸಿಎಂ ಒಗ್ಗಟಿನ ಸಂದೇಶ

ಬೆಂಗಳೂರು : ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ, ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನು ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಒಗ್ಗಟಿನ ಸಂದೇಶ ನೀಡಿದ್ದಾರೆ.  ನಾವಿಬ್ಬರು

ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾನು ಮತ್ತು ಉಪ ಮುಖ್ಯಮಂತ್ರ ಡಿ.ಕೆ. ಶಿವಕುಮಾರ್ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ್ದೇವೆ. ನಮಗೆ ಕರೆ ಮಾಡಿದ್ದ ಹೈಕಮಾಂಡ್​ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದರು. ಅದರಂತೆ ನಡೆದುಕೊಳ್ಳುತ್ತೇವೆ. ಹೈಕಮಾಂಡ್ ಸೂಚನೆಯಂತೆಯೇ ನಡೆದುಕೊಳ್ಳುತ್ತೇವೆ ಎಂದು ಈ ಹಿಂದೆಯೂ ಸ್ಪಷ್ಟಪಡಿಸಿದ್ದೆ. ಹೀಗಾಗಿ ನಮ್ಮ ನಡುವೆ ನಾಳೆಯಿಂದ ಯಾವುದೇ ಗೊಂದಲ ಇರಲ್ಲ. ಈಗಲೂ ಕೂಡ ಯಾವುದೇ ಗೊಂದಲ ಇಲ್ಲ. ಹಿಂದೆಯೂ ಇರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಸಭೆ ನಾವಿಬ್ಬರು

ಶಾಸಕರು ದೆಹಲಿಗೆ ಹೋಗಿದ್ದರ ಬಗ್ಗೆ ಮಾತನಾಡಿ, ಸಂಪುಟ ಪುನಾರಚನೆ ಮಾಡುತ್ತೇನೆ ಎಂದು ಹೇಳಿದ್ದೆ. ಹಾಗಾಗಿ ಕೆಲ ಶಾಸಕರು ಮಂತ್ರಿ ಮಾಡಿ ಎಂದು ದೆಹಲಿಗೆ ಹೋಗಿದ್ದರು. ನಾಯಕತ್ವದ ವಿರುದ್ಧವಾಗಿ ಶಾಸಕರು ದೆಹಲಿಗೆ ಹೋಗಿರಲಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಜನ ನಮ್ಮ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ವಿಧಾನಸಭೆ ಅಧಿವೇಶನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ. ನಮ್ಮದು ಒಂದೇ ಗುಂಪು, ಕಾಂಗ್ರೆಸ್ ಗುಂಪು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಾಸಕರು ದೆಹಲಿಗೆ ಹೋಗಿದ್ದೇಕೆ? ಸಿದ್ದರಾಮಯ್ಯ ಸ್ಪಷ್ಟನೆ

ನಾನು ಸಂಪುಟ ಪುನಾರಚನೆ ಮಾಡುತ್ತೇನೆ ಎಂದು ಹೇಳಿದ್ದೆ. ಹಾಗಾಗಿ ಕೆಲ ಶಾಸಕರು ಮಂತ್ರಿ ಮಾಡಿ ಎಂದು ದೆಹಲಿಗೆ ಹೋಗಿದ್ದರು. ನಾಯಕತ್ವದ ವಿರುದ್ಧವಾಗಿ ಶಾಸಕರು ದೆಹಲಿಗೆ ಹೋಗಿರಲಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಶಾಸಕರು ಹಾಗೂ ಸಚಿವರು ಸರ್ಕಾರದ ವಿರುದ್ಧ ಇಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವಿಬ್ಬರೂ ಬದ್ಧ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ಒಪ್ಪಿಕೊಳ್ಳುತ್ತೇವೆ. ಹೈಕಮಾಂಡ್​ ಹೇಳಿದ್ದರಿಂದ ಮಾತುಕತೆ ಮಾಡಿದ್ದೇವೆ. ಹೈಕಮಾಂಡ್​ಗೆ ಸಭೆಯ ಮಾಹಿತಿ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ನೋಡಿ :Breaking news| ಸಿಎಂ ಡಿಸಿಎಂ ಜಂಟಿ ಮಾಧ್ಯಮಗೋಷ್ಠಿ | #dkshivakumar #cmsiddaramaiah ನಾವಿಬ್ಬರು

 

Donate Janashakthi Media

Leave a Reply

Your email address will not be published. Required fields are marked *