ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಹಿಸೋದಿಲ್ಲ: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಕಠಿಣ ಎಚ್ಚರಿಕೆ

ಕಲಬುರಗಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆ, ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಿರ್ಲಕ್ಷ್ಯ

ಗುಲ್ಬರ್ಗಾ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಜುಲೈ 7ರಂದು ನಡೆದ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಿರ್ಲಕ್ಷ್ಯ

“ಸರ್ವರನ್ನು ಒಳಗೊಂಡ ಪರಿಶುದ್ಧ ಆಡಳಿತ, ಸಮಗ್ರ ಅಭಿವೃದ್ಧಿ ಹಾಗೂ ಕಟ್ಟಕಡೆಯ ವ್ಯಕ್ತಿಗೂ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನಮ್ಮ ಸರ್ಕಾರದ ಮುಖ್ಯ ಗುರಿ. ಇದಕ್ಕಾಗಿ ಅಧಿಕಾರಿಗಳು ಜವಾಬ್ದಾರಿಯಿಂದ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಸಭೆ: ರಾಜೀನಾಮೆ ಅಂಗೀಕಾರ ಸಾಧ್ಯತೆ

ಬಸವಾದಿ ಶರಣರ ಸಮಾನತೆಯ ತತ್ವವನ್ನು ನಂಬುವುದಾಗಿ ಹೇಳಿದ ಸಿಎಂ, ಉತ್ತರ ಕರ್ನಾಟಕ ಪ್ರವಾಸವನ್ನು ಬಸವಕಲ್ಯಾಣದಿಂದ ಆರಂಭಿಸಿರುವುದಾಗಿ ಉಲ್ಲೇಖಿಸಿದರು. “ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಒಂದೇ ವೇಗದಲ್ಲಿ ಸಾಗಬೇಕು” ಎಂದರು.

ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಜನತೆ ನೀಡಿರುವ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಜನರ ವಿಶ್ವಾಸವೇ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಹೇಳಿದರು. “ಜನಪರವಾಗಿ ಕೆಲಸ ಮಾಡಿದರೆ ಜನರ ಋಣ ತೀರಿಸಿದಂತಾಗುತ್ತದೆ, ಇಲ್ಲದಿದ್ದರೆ ಕ್ರಮ ಅನಿವಾರ್ಯ” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಅವರು, “ಒಬ್ಬ ಅರ್ಹ ಮತದಾರರೂ ತಮ್ಮ ಹಕ್ಕು ಕಳೆದುಕೊಳ್ಳಬಾರದು. ಬಿಎಲ್ಒಗಳು ಕನಿಷ್ಠ ಮೂರು ಬಾರಿ ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ” ಎಂದು ಸೂಚಿಸಿದರು.

ರಾಜ್ಯದ ನೀರಿನ ನಿರ್ವಹಣೆ ಕುರಿತು ಮಾತನಾಡಿದ ಅವರು, ಮಳೆಯ ಕೊರತೆಯ ಆತಂಕದ ನಡುವೆಯೂ ರಾಜ್ಯದ ಸ್ಥಿತಿ ಸಮಾಧಾನಕರವಾಗಿದೆ ಎಂದರು. ಅಂತಾರಾಜ್ಯ ಜಲ ವಿವಾದಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

ಕೃಷ್ಣ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆ ಯೋಜನೆಗೆ ಸುಮಾರು ₹1 ಲಕ್ಷ ಕೋಟಿ ವೆಚ್ಚದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ ಎಂದು ಹೇಳಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭಗೊಂಡ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ ಸಿಎಂ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಸಭೆಯಲ್ಲಿ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ನೋಡಿ: ನವ ಉದಾರವಾದಿ ಆರ್ಥಿಕತೆಯಲ್ಲಿ ನಿರುದ್ಯೋಗದ ಬಿಕ್ಕಟ್ಟು -ನಾಗರಾಜ ಶಾನಭೋಗ Janashakthi Media

Donate Janashakthi Media

Leave a Reply

Your email address will not be published. Required fields are marked *