ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆಲ್ಲುವುದಕ್ಕೆ ಸಾಧ್ಯವಾಗಿದ್ದು, ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತುಕೊಂಡು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ ಅವರು, ಹೊಸ ಸರ್ಕಾರ ಬಂದಿದೆ. ಅವರಿಗೆ ಶುಭವಾಗಲಿ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಇತ್ತು.  ಇದನ್ನ ಕಾಂಗ್ರೆಸ್ ಅವರು ಹಣದಿಂದ ಮತ್ತೊಂದು ಮಗದೊಂದ ವಿಚಾರದಲ್ಲಿ ಕಾಂಗ್ರೆಸ್ ಗೆದ್ದಿದ್ದಾರೆ. ನಮ್ಮದು ‌ಪ್ರಾದೇಶಿಕ ಪಕ್ಷ. ನಮ್ಮಲ್ಲಿ ದೊಡ್ಡ ಮಟ್ಟದಲ್ಲಿ ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರು ನಾವು 60 ಲಕ್ಷ ಮತ ಪಡೆದಿದ್ದೇವೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯ್ತಿ ಹಾಗೂ ಲೋಕಸಭೆ ಚುನಾವಣೆಗೆ ನಾವು ಸಿದ್ದವಾಗಿ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

ಇದನ್ನೂ ಓದಿ :ಕಾಂಗ್ರೆಸ್‌ ಮುಖಂಡರು ಮೀಸಲಾತಿ ವಿಚಾರವಾಗಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ : ಸಿ.ಎಂ.ಇಬ್ರಾಹಿಂ

ನೀವು ಕಾಂಗ್ರೆಸ್‌ನಲ್ಲಿ ಇದ್ದಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತು ಎಂದು ಮಾಧ್ಯಮಗಳಿಂದ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಗೌರವ ಇಲ್ಲದ ಕಡೆ ನಾನು ಇರೊಲ್ಲ. ಅಂತಹ ಸ್ಥಾನಕ್ಕೆ ನಾನು ಹೋಗಿಲ್ಲ. ಮಾನಕ್ಕಾಗಿ ಹಾಗೂ ಮರ್ಯಾದೆಗಾಗಿಯೇ ನಾನು ಪಕ್ಷವನ್ನು ಬಿಟ್ಟು ಬಂದೆ. ನನಗೆ ಯಾವುದೇ ಅಧಿಕಾರದ ಆಸೆ ಇಲ್ಲವೆಂದು ತಿಳಿಸಿದರು.

ಖಾದರ್ ಗೆ ಸ್ಪೀಕರ್ ಸ್ಥಾನ ನೀಡಿದ ವಿಚಾರವಾಗಿ ಮಾತನಾಡಿ ಸಿಎಂ ಇಬ್ರಾಹಿಂ ಕಾಂಗ್ರೆಸ್ ವಿರುದ್ದ ಇಬ್ರಾಹಿಂ ಆಕ್ರೋಶವಾಗಿತ್ತು. ಖಾದರ್ ಅವರನ್ನ ಉಪಮುಖ್ಯಮಂತ್ರಿ ಮಾಡಬಹುದಿತ್ತು. ಈಗ ಸ್ಪೀಕರ್ ಮಾಡಿದ್ದರಿಂದ ಅವರು ಮಾತಾಡೋಕೂ ಬಾರದಂತೆ ಮಾಡಿಟ್ಟಿದ್ದಾರೆ. ಎದ್ದೋಳಿ, ಕುಳಿತುಕೊಳ್ಳಿ ಎನ್ನಬೇಕು ಅಷ್ಟೆ. ಆದರೂ ಖಾದರ್ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

Donate Janashakthi Media

Leave a Reply

Your email address will not be published. Required fields are marked *