ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಣೆಗೆ ಸಿಎಂ ಸೂಚನೆ

Please follow and like us:
ಬೆಂಗಳೂರು: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು, 15 ಅಕ್ಟೋಬರ್‌ ರಂದು, ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿತ್ತು. ಸಭೆಯ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ನಿಗಮಕ್ಕೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಕ್ಕೂ ಸಭೆ ಗಮನ ನೀಡಿದೆ ಎಂದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ದಿ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ ಗೆ ಜಾಮೀನು ಮಂಜೂರು

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ. ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ. ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ ಎಂದರು.

ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇದನ್ನೂ ನೋಡಿ: ವಚನಾನುಭವ -16| ಮರಣವೇ ಮಹಾನವಮಿ – ಸತ್ಯದ ಹುಡುಕಾಟ – ಮೀನಾಕ್ಷಿ ಬಾಳಿ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *